104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಗ್ಲೆನ್ ಮ್ಯಾಕ್ಸ್​ವೆಲ್

Updated on: Dec 29, 2025 | 7:53 AM

Melbourne Stars vs Sydney Thunder: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್​ಗಳು ಮಾತ್ರ. ಈ ಗುರಿಯನ್ನು ಮೆಲ್ಬೋರ್ನ್​ ಸ್ಟಾರ್ಸ್ ತಂಡವು 14 ಓವರ್​ಗಳಲ್ಲಿ ಚೇಸ್ ಮಾಡಿ 9 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅಬ್ಬರಿಸಿದ್ದಾರೆ. ಮನುಕಾ ಓವಲ್ ಮೈದಾನದಲ್ಲಿ ನಡೆದ ಸಿಡ್ನಿ ಥಂಡರ್ ವಿರುದ್ಧದ ಪಂದ್ಯದಲ್ಲಿ ಮೆಲ್ಬೋರ್ನ್​ ಸ್ಟಾರ್ಸ್​ ಪರ ಕಣಕ್ಕಿಳಿದ ಮ್ಯಾಕ್ಸಿ 20 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 39 ರನ್ ಬಾರಿಸಿದ್ದಾರೆ.

ಅದರಲ್ಲೂ ಡೇನಿಯಲ್ ಸ್ಯಾಮ್ಸ್ ಎಸೆತದಲ್ಲಿ 104 ಮೀಟರ್ ಸಿಕ್ಸ್ ಸಿಡಿಸುವ ಮೂಲಕ ಮ್ಯಾಕ್ಸ್​ವೆಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಿಕ್ಸರ್​ ಸರದಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ 2 ಸಿಕ್ಸ್​ ಸಿಡಿಸುವುದರೊಂದಿಗೆ ಮ್ಯಾಕ್ಸಿ ಬಿಗ್ ಬ್ಯಾಷ್ ಲೀಗ್​ನಲ್ಲಿ 150 ಸಿಕ್ಸರ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ 220 ಸಿಕ್ಸ್ ಸಿಡಿಸಿರುವ ಕ್ರಿಸ್ ಲಿನ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 151 ಸಿಕ್ಸರ್​ಗಳೊಂದಿಗೆ ಗ್ಲೆನ್ ಮ್ಯಾಕ್ಸ್​ವೆಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್​ಗಳು ಮಾತ್ರ. ಈ ಗುರಿಯನ್ನು ಮೆಲ್ಬೋರ್ನ್​ ಸ್ಟಾರ್ಸ್ ತಂಡವು 14 ಓವರ್​ಗಳಲ್ಲಿ ಚೇಸ್ ಮಾಡಿ 9 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

 

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More