VIDEO: ಮ್ಯಾಕ್ಸ್ವೆಲ್ ಮ್ಯಾಜಿಕ್… ಎಂತಹ ಅದ್ಭುತ ಕ್ಯಾಚ್
Australia vs South Africa: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಟಿಮ್ ಡೇವಿಡ್ (83) ಅವರ ಅರ್ಧಶತಕದ ನೆರವಿನೊಂದಿಗೆ 20 ಓವರ್ಗಳಲ್ಲಿ 178 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 161 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡ 17 ರನ್ಗಳ ಜಯ ಸಾಧಿಸಿದೆ.
ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಹಿಡಿದ ಕ್ಯಾಚ್ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಆಸ್ಟ್ರೇಲಿಯಾದ ಡಾರ್ವಿನ್ನ ಮರ್ರಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆತಿಥೇಯರು 20 ಓವರ್ಗಳಲ್ಲಿ 10 ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿದ್ದರು.
179 ರನ್ಗಳ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಆರಂಭಿಕ ದಾಂಡಿಗ ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಪರಿಣಾಮ ಕೊನೆಯ ಓವರ್ನಲ್ಲಿ ಸೌತ್ ಆಫ್ರಿಕಾ ತಂಡಕ್ಕೆ 21 ರನ್ಗಳ ಅವಶ್ಯಕತೆಯಿತ್ತು. ಬೆನ್ ದ್ವಾರಶುಯಿಸ್ ಎಸೆದ 20ನೇ ಓವರ್ನ 2ನೇ ಎಸೆತದಲ್ಲಿ ರಿಕೆಲ್ಟನ್ ಲಾಂಗ್ ಆನ್ನತ್ತ ಭರ್ಜರಿಯಾಗಿ ಬಾರಿಸಿದ್ದರು.
ಚೆಂಡು ಇನ್ನೇನು ಬೌಂಡರಿ ಲೈನ್ ದಾಟಲಿದೆ ಅನ್ನುವಷ್ಟರಲ್ಲಿ ಗಾಳಿಯಲ್ಲಿ ಜಿಗಿದ ಗ್ಲೆನ್ ಮ್ಯಾಕ್ಸ್ವೆಲ್ ಚೆಂಡನ್ನು ತಡೆದರು. ಅಷ್ಟೇ ಅಲ್ಲದೆ ಅಷ್ಟೇ ವೇಗದಲ್ಲಿ ಬೌಂಡರಿ ಲೈನ್ ಒಳಗೆ ಮರಳಿದ ಮ್ಯಾಕ್ಸಿ ಕ್ಯಾಚ್ ಹಿಡಿದರು. ಇದೀಗ ಈ ಅದ್ಭುತ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು, ಗ್ಲೆನ್ ಮ್ಯಾಕ್ಸ್ವೆಲ್ ಫೀಲ್ಡಿಂಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 179 ರನ್ಗಳ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 161 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡ 17 ರನ್ಗಳ ಜಯ ಸಾಧಿಸಿದೆ.