AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ-ಇರಾನ್ ಯುದ್ಧ ಅಂತ್ಯ: ಕಚ್ಚಾ ತೈಲ ಬೆಲೆಯಲ್ಲಿ ಒಂದೇ ದಿನ ಭಾರಿ ಇಳಿಕೆ! ಪೆಟ್ರೋಲ್, ಡೀಸೆಲ್ ದರ ಕಡಿತ ನಿರೀಕ್ಷೆ

ಅಮೆರಿಕ-ಇರಾನ್ ಯುದ್ಧ ಅಂತ್ಯ: ಕಚ್ಚಾ ತೈಲ ಬೆಲೆಯಲ್ಲಿ ಒಂದೇ ದಿನ ಭಾರಿ ಇಳಿಕೆ! ಪೆಟ್ರೋಲ್, ಡೀಸೆಲ್ ದರ ಕಡಿತ ನಿರೀಕ್ಷೆ

ಗಣಪತಿ ಶರ್ಮಾ
|

Updated on: Jun 15, 2026 | 9:08 AM

Share

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಕುಸಿದಿದೆ. ಬ್ರೆಂಟ್ ಕ್ರೂಡ್ ಬೆಲೆ 80 ಡಾಲರ್​ಗೆ ಇಳಿದಿದ್ದು, ಒಂದೇ ದಿನದಲ್ಲಿ ಶೇ 4 ಕುಸಿತ ಕಂಡಿದೆ. ಹಾರ್ಮುಝ್ ಜಲಸಂಧಿ ಈಗ ಮುಕ್ತವಾಗಿದ್ದು, ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನ ಬೆಲೆ ಇಳಿಕೆಯಾಗುವ ನಿರೀಕ್ಷೆ ಮೂಡಿದೆ. ಇದರಿಂದ ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ.

ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕುಸಿತ ಕಂಡಿದೆ. ಯುದ್ಧ ವಿರಾಮದ ಘೋಷಣೆ ಮತ್ತು ಉಭಯ ದೇಶಗಳ ನಡುವೆ ಒಪ್ಪಂದದ ನಿರೀಕ್ಷೆಯಿಂದಾಗಿ ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ ಶೇಕಡಾ 4ರಷ್ಟು ಕುಸಿತ ಕಂಡು 80 ಡಾಲರ್​ಗೆ ಬಂದಿಳಿದಿದೆ. ಈ ಹಿಂದೆ ಯುದ್ಧದ ಭೀತಿಯಿಂದಾಗಿ ಕಚ್ಚಾ ತೈಲ ಬೆಲೆ ಗಗನಕ್ಕೇರಿ, ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿ ಜನಸಾಮಾನ್ಯರು ಆತಂಕದಲ್ಲಿದ್ದರು. ಇದೀಗ ಹಾರ್ಮುಝ್ ಜಲಸಂಧಿ ಮುಕ್ತವಾಗಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದು, ಹಡಗುಗಳ ಸಂಚಾರ ಸುಗಮವಾಗಲಿದೆ.

ಜಾಗತಿಕ ಮಟ್ಟದಲ್ಲಿ ನಿರ್ಮಾಣವಾಗಿದ್ದ ಆರ್ಥಿಕ ತಲ್ಲಣ ಸದ್ಯಕ್ಕೆ ನಿವಾರಣೆಯಾಗುವ ಲಕ್ಷಣಗಳು ಗೋಚರಿಸಿದ್ದು, ಇಂಧನ ಬೆಲೆ ಇಳಿಕೆಯಾಗುವ ನಿರೀಕ್ಷೆ ದಟ್ಟವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯ ನಿರೀಕ್ಷೆ ಮೂಡಿದೆ. ಇದು ವ್ಯಾಪಾರಸ್ಥರು, ವಾಹನ ಸವಾರರು ಮತ್ತು ಗೃಹ ಬಳಕೆಯ ಅನಿಲ ಬಳಸುವವರಿಗೆ ದೊಡ್ಡ ಮಟ್ಟದ ನೆಮ್ಮದಿ ನೀಡಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More