AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ: ಸಂವಿಧಾನ ಪ್ರತಿ ಪ್ರದರ್ಶಿಸಿ ವಿಪಕ್ಷಗಳಿಗೆ ಸಚಿವರ ಕೌಂಟರ್​

ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ: ಸಂವಿಧಾನ ಪ್ರತಿ ಪ್ರದರ್ಶಿಸಿ ವಿಪಕ್ಷಗಳಿಗೆ ಸಚಿವರ ಕೌಂಟರ್​

ಹರೀಶ್ ಜಿ.ಆರ್​.
| Edited By: |

Updated on:Aug 19, 2026 | 4:41 PM

Share

ವಿಧಾನ ಪರಿಷತ್ ಅಧಿವೇಶನಕ್ಕೆ ಸಚಿವ ಬಿ. ನಾಗೇಂದ್ರ ಆಗಮಿಸುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ನಾಗೇಂದ್ರ ಗೋ ಬ್ಯಾಕ್ ಘೋಷಣೆ ಕೂಗಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸಚಿವ ನಾಗೇಂದ್ರ ನಗುತ್ತಲೇ ವಿಪಕ್ಷ ಸದಸ್ಯರಿಗೆ ಕೈಮುಗಿದು ಸಂವಿಧಾನವನ್ನು ಪ್ರದರ್ಶಿಸಿದರು. ವಾಲ್ಮೀಕಿ ನಿಗಮದ ಹಗರಣ ಸಂಬಂಧ ವಿಪಕ್ಷಗಳು ಉಭಯ ಸದನಗಳಲ್ಲಿಯೂ ಹೋರಾಟ ನಡೆಸುತ್ತಿದ್ದು, ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿವೆ.

ಬೆಂಗಳೂರು, ಆಗಸ್ಟ್​​ 19: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಉಭಯ ಸದನಗಳಲ್ಲಿ ಒಂದೂ ಕೂಡ ಪ್ರತಿಭಟನೆ ಮುಂದುವರಿಸಿವೆ. ಈ ನಡುವೆ ಪರಿಷತ್ ಕಲಾಪಕ್ಕೆ ನಾಗೇಂದ್ರ ಆಗಮಿಸುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ನಾಗೇಂದ್ರ ಗೋ ಬ್ಯಾಕ್ ಎಂದು ಘೋಷಣೆಗಳನ್ನು ಕೂಗಿದ ಪ್ರಸಂಗ ನಡೆದಿದೆ. ಈ ಸಂದರ್ಭದಲ್ಲಿ ನಾಗೇಂದ್ರ ಅವರು ನಗುತ್ತಲೇ, ವಿರೋಧ ಪಕ್ಷದ ಸದಸ್ಯರತ್ತ ಕೈಮುಗಿದು ಸಂವಿಧಾನದ ಪ್ರತಿಯನ್ನು ಪ್ರದರ್ಶಿಸುವ ಮೂಲಕ ವಿಪಕ್ಷಗಳ ಘೋಷಣೆಗಳಿಗೆ ಕೌಂಟರ್​​ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 19, 2026 02:02 PM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More