AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!

‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 28, 2026 | 12:35 PM

Share

ಬಾಗಲಕೋಟೆ ಉಪಚುನಾವಣಾ ಪ್ರಚಾರದ ಸಂದರ್ಭದಲ್ಲಿ ವಕ್ಫ್ ಸಚಿವ ಜಮೀರ್ ಅಹ್ಮದ್ ವಿರುದ್ಧ ಮುಸ್ಲಿಂ ಮುಖಂಡರು ಹಾಗೂ ಅಂಜುಮನ್ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ 9 ತಿಂಗಳಿಂದ ಅನುಮೋದನೆ ನೀಡದೆ ಸತಾಯಿಸಿದ್ದರಿಂದ ಜಮೀರ್ ಅಹ್ಮದ್ ಬಾಗಲಕೋಟೆ ಪ್ರಚಾರಕ್ಕೆ ಬರಬಾರದೆಂದು ‘ಗೋ ಬ್ಯಾಕ್’ ಅಭಿಯಾನ ನಡೆಸಿದ್ದಾರೆ.

ಬಾಗಲಕೋಟೆ, ಮಾರ್ಚ್​ 28: ಬಾಗಲಕೋಟೆ ಉಪಚುನಾವಣೆ (By election) ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಳನ್ನು ಅನುಸರಿಸುತ್ತಿವೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಅಲ್ಪಸಂಖ್ಯಾತ ನಾಯಕರೆಂದು ಗುರುತಿಸಿಕೊಂಡಿರುವ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರಿಗೆ ಬಾಗಲಕೋಟೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಅಂಜುಮನ್ ಸಮಿತಿಯ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಜಮೀರ್ ಅಹ್ಮದ್ ಅವರು ಪ್ರಚಾರಕ್ಕೆ ಬರುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಜಮೀರ್​ ಅಹ್ಮದ್’ ಅಭಿಯಾನ ನಡೆಸಿದ್ದಾರೆ.

ಈ ವಿರೋಧಕ್ಕೆ ಪ್ರಮುಖ ಕಾರಣ, ಅಂಜುಮನ್ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಬೆಳವಣಿಗೆಗಳು. ಹಿಂದೆ ಇದ್ದ ಅಧ್ಯಕ್ಷರನ್ನು ಅವಿಶ್ವಾಸ ಗೊತ್ತುವಳಿ ಮೂಲಕ ಬದಲಾಯಿಸಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಅದರ ಅನುಮೋದನೆಗಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಕಳುಹಿಸಲಾಗಿತ್ತು. ಆದರೆ, ವಕ್ಫ್ ಸಚಿವರ ಇಲಾಖೆಯಿಂದ ಈ ಕೆಲಸಕ್ಕೆ ಒಂಬತ್ತು ತಿಂಗಳು ವಿಳಂಬವಾಗಿದೆ ಎಂದು ಆರೋಪಿಸಲಾಗಿದೆ. ಬಡ ಸಂಸ್ಥೆಯಾದ ಅಂಜುಮನ್‌ಗೆ ಅನ್ಯಾಯ ಮಾಡಲಾಗಿದೆ ಎಂಬುದು ಮುಸ್ಲಿಂ ಮುಖಂಡರ ಆರೋಪವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More