Video: ಗೋವಾದ ನೈಟ್‌ಕ್ಲಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ಹೇಗೆ? ಇಲ್ಲಿದೆ ಕಾರಣ
ಉತ್ತರ ಗೋವಾದ ಅರ್ಪೋರಾದಲ್ಲಿರುವ ಜನಪ್ರಿಯ 'ಬಿರ್ಚ್ ಬೈ ರೋಮಿಯೋ ಲೇನ್' ನೈಟ್‌ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಾಲ್ವರು ಪ್ರವಾಸಿಗರು ಸೇರಿದಂತೆ ಹೆಚ್ಚಿನ ಜನರು ನೆಲಮಾಳಿಗೆಯಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ, ಇದು ಅಗ್ನಿ ಸುರಕ್ಷತೆ ಮತ್ತು ಕಟ್ಟಡ ಸಂಹಿತೆ ಉಲ್ಲಂಘನೆಯ ಗಂಭೀರ ಆರೋಪಗಳನ್ನು ಎತ್ತಿ ತೋರಿಸುತ್ತದೆ.
ಗೋವಾ, ಡಿಸೆಂಬರ್ 08: ಉತ್ತರ ಗೋವಾದ ಅರ್ಪೋರಾದಲ್ಲಿರುವ ಜನಪ್ರಿಯ ‘ಬಿರ್ಚ್ ಬೈ ರೋಮಿಯೋ ಲೇನ್’ ನೈಟ್‌ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಾಲ್ವರು ಪ್ರವಾಸಿಗರು ಸೇರಿದಂತೆ ಹೆಚ್ಚಿನ ಜನರು ನೆಲಮಾಳಿಗೆಯಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಈ ದುರಂತವು ಭಾರೀ ಪೊಲೀಸ್ ತನಿಖೆಗೆ ನಾಂದಿ ಹಾಡಿದ್ದು, ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು. ಸುರಕ್ಷತಾ ನಿಯಮಗಳ ಜಾರಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಈ ಘಟನೆಯ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದಾರೆ.
ನೃತ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಕ್ಲಬ್ ಒಳಗೆ ಪಟಾಕಿಯನ್ನು ಹೊತ್ತಿಸಲಾಗಿತ್ತು ಅದರಿಂದಾಗಿಯೇ ಮರದ ಸೀಲಿಂಗ್ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ದೆಹಲಿ ಮೂಲದ ನೈಟ್‌ಕ್ಲಬ್ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮುಖ್ಯಮಂತ್ರಿ ಸಾವಂತ್ ಅವರು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಧಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ