ಮಾಜಿ ಪ್ರಧಾನಿ ದೇವೇಗೌಡರ ಬೆಂಗಳೂರು ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ

Updated on: May 21, 2026 | 6:22 AM

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯವನ್ನೂ ಕೋರಿದರು. ಈ ಭೇಟಿಯು ಎರಡೂ ರಾಜ್ಯಗಳ ನಡುವಿನ ಸೌಹಾರ್ದ ಸಂಬಂಧವನ್ನು ಬಿಂಬಿಸಿತು.

ಬೆಂಗಳೂರು, ಮೇ 21: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ ಪ್ರಮೋದ್ ಸಾವಂತ್ ಅವರು ದೇವೇಗೌಡರ ಆರೋಗ್ಯ ಕುಶಲೋಪರಿಯನ್ನ ವಿಚಾರಿಸಿದ್ದಾರೆ. ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯವನ್ನೂ ಕೋರಿದ್ದಾರೆ. ರಾಜಕೀಯ ವಲಯದಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More