Video: ಕುಡಿದ ಮತ್ತಿನಲ್ಲಿ ಕಾರನ್ನು ಹಿಮ್ಮುಖವಾಗಿ ಚಲಾಯಿಸಿ ಪಾದಚಾರಿಗೆ ಗುದ್ದಿದ ವ್ಯಕ್ತಿ, ಭಯಾನಕ ವಿಡಿಯೋ

Updated on: Dec 03, 2025 | 12:31 PM

ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಕಾರನ್ನು ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಕಾರು ಪಾದಚಾರಿಗೆ ಗುದ್ದಿ ಗಂಭೀರ ಗಾಯಗೊಂಡಿರುವ ಘಟನೆ ಗೋವಾದ ಪಣಜಿಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಮುಕುಲ್ ಜೋಶಿ ಎಂದು ಗುರುತಿಸಲಾಗಿದೆ. ಘಟನೆಯ ಸಮಯದಲ್ಲಿ, ಕಾರು ಚಲಾಯಿಸುತ್ತಿದ್ದ 18 ವರ್ಷದ ಶಾಹಿದ್ ಮೊಹರಂ ಅನ್ಸಾರಿ ಕುಡಿದಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಗೋವಾದ ತಲೈಗಾಂವ್ ಪ್ರದೇಶದ ನಿವಾಸಿ. ಡಿಸೆಂಬರ್ 2 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಪಣಜಿ, ಡಿಸೆಂಬರ್ 03: ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಕಾರನ್ನು ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಕಾರು ಪಾದಚಾರಿಗೆ ಗುದ್ದಿ ಗಂಭೀರ ಗಾಯಗೊಂಡಿರುವ ಘಟನೆ ಗೋವಾದ ಪಣಜಿಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಮುಕುಲ್ ಜೋಶಿ ಎಂದು ಗುರುತಿಸಲಾಗಿದೆ. ಘಟನೆಯ ಸಮಯದಲ್ಲಿ, ಕಾರು ಚಲಾಯಿಸುತ್ತಿದ್ದ 18 ವರ್ಷದ ಶಾಹಿದ್ ಮೊಹರಂ ಅನ್ಸಾರಿ ಕುಡಿದಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಗೋವಾದ ತಲೈಗಾಂವ್ ಪ್ರದೇಶದ ನಿವಾಸಿ. ಡಿಸೆಂಬರ್ 2 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲು ಬೈಕ್​ಗೆ ಡಿಕ್ಕಿ ಹೊಡೆದು ಬಳಿಕ ಜೋಶಿಗೆ ಡಿಕ್ಕಿ ಹೊಡೆದಿದ್ದಾನೆ. ಜೋಶಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅವರ ಕಾಲು ಮುರಿತಕ್ಕೊಳಗಾಗಿದೆ. ವಿಡಿಯೋದಲ್ಲಿ ಜೋಶಿಯ ಪಕ್ಕದಲ್ಲಿದ್ದ ವ್ಯಕ್ತಿಯೊಬ್ಬರು ಕಾರು ಬರುವುದನ್ನು ನೋಡಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವುದನ್ನು ಕಾಣಬಹುದು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ