ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ: ವಾಹನ ಸಂಚಾರಕ್ಕೆ ಅಡಚಣೆ

Edited By:

Updated on: Jul 05, 2025 | 3:24 PM

ನಿರಂತರ ಭಾರಿ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಅನಮೋಡ ಬಳಿ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಸುಮಾರು 500 ಮೀಟರ್ ರಸ್ತೆ ಕುಸಿದಿದ್ದು, ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ದುರಸ್ತಿ ಕಾರ್ಯಗಳು ಪ್ರಗತಿಯಲ್ಲಿವೆ.

ನಿರಂತರ ಮಳೆಗೆ ಕರ್ನಾಟಕ ಮತ್ತು ಗೋವಾ ಮಧ್ಯೆ ಸಂಪರ್ಕ ಕಲ್ಪಿಸುವ ಅನಮೋಡ ಬಳಿಯ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ. ಇದರಿಂದ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ನಿಧಾನಗತಿಯ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿಯ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ಸುಮಾರು 500 ಮೀಟರ್​ನಷ್ಟು ಬಿರುಕು ಬಿಟ್ಟಿತ್ತು. ಹೀಗಾಗಿ, ಹೆದ್ದಾರಿಗೆ ಮೇಲಿಂದ ಸಿಮೆಂಟ್ ಹಾಕಲಾಗಿತ್ತು. ಇದಂಉ (ಜು.05) ಕುಸಿತವಾಗಿದೆ. ಗೋವಾ ಮತ್ತು ಕರ್ನಾಟಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.