AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟ ಕೆಲಸ ಮಾಡಿ ಪೂಜೆ ಮಾಡಿದ್ರೆ ದೇವ್ರು ಒಳ್ಳೇದು ಮಾಡಲ್ಲ: ಸಿದ್ದರಾಮಯ್ಯ ಮಾರ್ಮಿಕ ಮಾತು

ಕೆಟ್ಟ ಕೆಲಸ ಮಾಡಿ ಪೂಜೆ ಮಾಡಿದ್ರೆ ದೇವ್ರು ಒಳ್ಳೇದು ಮಾಡಲ್ಲ: ಸಿದ್ದರಾಮಯ್ಯ ಮಾರ್ಮಿಕ ಮಾತು

ರಾಮ್​, ಮೈಸೂರು
| Edited By: |

Updated on: Oct 28, 2026 | 8:26 PM

Share

ಮುಖ್ಯಾಂಶಗಳು

  • ಮೈಸೂರು ಜಿಲ್ಲೆ ಕೆ.ಆರ್.ನಗರದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ
  • ಕೆಟ್ಟ ಕೆಲಸ ಮಾಡಿ ಪೂಜೆ ಮಾಡಿದರೆ ದೇವರು ಒಳ್ಳೆಯದು ಮಾಡುವುದಿಲ್ಲ
  • ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಕೆ.ಆರ್. ನಗರದ ಬಸವ ಜಯಂತಿ ಕಾರ್ಯಕ್ರಮದಲ್ಲಿ ದೇವರು, ನೀತಿ ಮತ್ತು ನಂಬಿಕೆಗಳ ಕುರಿತು ಮಾತನಾಡಿದರು. ಕೆಟ್ಟ ಕೆಲಸಗಳನ್ನು ಮಾಡಿ ಪೂಜೆ ಸಲ್ಲಿಸಿದರೆ ದೇವರು ಒಲಿಯುವುದಿಲ್ಲ, ಬದಲಾಗಿ ಇನ್ನೊಬ್ಬರಿಗೆ ಕೇಡು ಬಯಸದೆ ಪೂಜಿಸಿದರೆ ಮಾತ್ರ ಒಳಿತಾಗುತ್ತದೆ ಎಂದಿದ್ದಾರೆ. ತಾವು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿಯೂ ತಿಳಿಸಿದ್ದಾರೆ.

ಮೈಸೂರು, ಅಕ್ಟೋಬರ್​​ 28: ‘ಕೆಟ್ಟ ಕೆಲಸ ಮಾಡಿ ಪೂಜೆ ಮಾಡಿದರೆ ದೇವರು ಒಳ್ಳೆಯದು ಮಾಡುವುದಿಲ್ಲ. ಇನ್ನೊಬ್ಬರಿಗೆ ಕೇಡು ಬಯಸದೆ ಪೂಜೆ ಮಾಡಿದರೆ ಮಾತ್ರ ಒಳ್ಳೇದು ಮಾಡುತ್ತಾನೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾರ್ಮಿಕವಾಗಿ ಹೇಳಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು,‘ ದೇವರು ಇದ್ದಾನೆ, ಇಲ್ಲ ಎಂದು ನಾನು ಯಾವತ್ತೂ ಹೇಳಿಲ್ಲ’ ಎಂದರು. ಇನ್ನು ಇದೇ ವೇಳೆ ‘8 ವರ್ಷ ಸಿಎಂ ಆಗಿ 17 ಬಜೆಟ್ ಮಂಡಿಸಿದ್ದೇನೆ, ಇದು ರಾಜ್ಯದಲ್ಲಿ ರೆಕಾರ್ಡ್. ನಾನು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More