Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ
ಗುರುವಾರ (ಅಕ್ಟೋಬರ್ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಯಿತು. ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನಾವಾದ ಇಂದು (ನ.02) ದೇವಿಯ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಭಕ್ತರು ನಸುಕಿನ ಜಾವ 4 ಗಂಟೆಯಿಂದ ದರ್ಶನಕ್ಕೆ ಪಡೆಯುತ್ತಿದ್ದಾರೆ. ಹಾಸನಂಬ ದೇಗುಲದ ಬಾಗಿಲು ರವಿವಾರ (ನ.03) ರಂದು ಮುಚ್ಚಲಿದೆ.
ಹಾಸನದ ಹಾಸನಾಂಬೆ ದರ್ಶನಕ್ಕೆ ಇಂದು (ನ.02) ಕೊನೆಯ ದಿನವಾಗಿದೆ. ಸರಿಯಾಗಿ ಒಂಬತ್ತು ದಿನಗಳ ಹಿಂದೆ, ಅಂದರೆ ಅಕ್ಟೋಬರ್ 24 ಗುರುವಾರ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿತ್ತು. ರವಿವಾರ (ನ.03) ದೇಗುಲದ ಬಾಗಿಲು ಮುಚ್ಚಲಾಗುತ್ತದೆ. ಹೀಗಾಗಿ, ಶನಿವಾರ ದೇವಿ ದರ್ಶನಕ್ಕೆ ಕೊನೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದು, ದೇವಿ ದರ್ಶನ ಪಡೆಯುತ್ತಿದ್ದಾರೆ. ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ. ಶುಕ್ರವಾರದಿಂದ ವಿವಿಐಪಿ ಹಾಗೂ ವಿಐಪಿ ಪಾಸ್ಗಳು ರದ್ದು ಮಾಡಲಾಗಿದೆ. ರವಿವಾರ ನಸುಕಿನ ಜಾವ 4 ಗಂಟೆವರೆಗೂ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ, ಮಧ್ಯಾಹ್ನ 12ಕ್ಕೆ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ.
Published on: Nov 02, 2024 08:27 AM