ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ; ಪುಣ್ಯಸ್ನಾನ ಮಾಡಿದ ರಮೇಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 13, 2025 | 12:35 PM

ರಮೇಶ್ ಜಾರಕಿಹೊಳಿ ಅವರಿಗೆ ಈಗ 65ರ ಪ್ರಾಯ, ಅದರೆ ನೀಟಾಗಿ ಕ್ರಾಪು ಮಾಡಿಸಿಕೊಂಡು ಟೀ ಶರ್ಟ್ ಧರಿಸಿ ಪ್ರಯಾಗ್ ರಾಜ್ ನಲ್ಲಿ ಓಡಾಡುತ್ತಿದ್ದ ಶಾಸಕ 40 ಯುವಕನಂತೆ ಕಾಣುತ್ತಿದ್ದರು. ರಾಜ್ಯ ರಾಜಕೀಯದ ಬಗ್ಗೆ ಮಾತಾಡುವುದಾದರೆ ಅವರು ಬಸನಗೌಡ ಯತ್ನಾಳ್ ಮತ್ತು ಇತರ ಕೆಲ ಬಿಜೆಪಿ ನಾಯಕರೊಂದಿಗೆ ವಕ್ಫ್​ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಮರ ಸಾರಿದ್ದಾರೆ.

ಪ್ರಯಾಗ್​ರಾಜ್ (ಉತ್ತರ ಪ್ರದೇಶ): ಮಹಾಕುಂಭಮೇಳದಲ್ಲಿ ಕರ್ನಾಟಕದ ಗಣ್ಯರು ಪುಣ್ಯಸ್ನಾನ ಮಾಡುವುದು ಮುಂದುವರಿದಿದೆ. ಗೋಕಾಕ ಬಿಜೆಪಿ ಶಾಸಕ ಮತ್ತು ರಾಜ್ಯ ಬಿಜೆಪಿ ಘಟಕದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿಯವರು ಸಹ ಪ್ರಯಾಗ್​ರಾಜ್ ತೆರಳಿ ಪುಣ್ಯಸ್ನಾನ ಮಾಡಿದರು. ಅವರೊಂದಿಗೆ ಕೆಲ ಸ್ನೇಹಿತರು ಸಹ ಇದ್ದರು. ಮೊನ್ನೆಯಷ್ಟೇ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತರಾಗಿ ಪ್ರಯಾಗ್​ರಾಜ್​ಗೆ ಅಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ರಮೇಶ್ ಜಾರಕಿಹೊಳಿ ಬಿಜೆಪಿಗೆ ಬರದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದರೆ ? ಯತ್ನಾಳ್

Published on: Feb 13, 2025 12:34 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.