ಗೋಕಾಕ್: ಪೊಲೀಸರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ, ವಿಡಿಯೋ ವೈರಲ್
ಬಿಜೆಪಿ ನಾಯಕ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ. ಗೋಕಾಕ್ನ ಲಕ್ಷ್ಮೀ ದೇವಿ ಜಾತ್ರೆ ವೇಳೆ ಪೊಲೀಸರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ಸಂತೋಷ್ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಇಲ್ಲಿದೆ.
ಬೆಳಗಾವಿ, ಜುಲೈ 5: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಜಾತ್ರೆಯಲ್ಲಿ ನೂರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Published on: Jul 05, 2025 03:08 PM
Latest Videos