ಗೋಕಾಕ್: ಪೊಲೀಸರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ, ವಿಡಿಯೋ ವೈರಲ್

Edited By:

Updated on: Jul 05, 2025 | 3:08 PM

ಬಿಜೆಪಿ ನಾಯಕ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ. ಗೋಕಾಕ್​ನ ಲಕ್ಷ್ಮೀ ದೇವಿ ಜಾತ್ರೆ ವೇಳೆ ಪೊಲೀಸರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ಸಂತೋಷ್ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಇಲ್ಲಿದೆ.

ಬೆಳಗಾವಿ, ಜುಲೈ 5: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್​ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಜಾತ್ರೆಯಲ್ಲಿ ನೂರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 05, 2025 03:08 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More