ಬೇಸಿಗೆಯಲ್ಲೂ ಮೈತುಂಬಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ಪ್ರವಾಸಿಗರ ದಂಡು
ಳಗಾವಿ ಜಿಲ್ಲೆಯ ಗೋಕಾಕ್ ಹೊರ ವಲಯದಲ್ಲಿರುವ ಗೋಕಾಕ್ ಫಾಲ್ಸ್ ಧುಮ್ಮಿಕ್ಕುತ್ತಿದೆ. ಇದನ್ನು ನೋಡಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್ ಗೆ ಜೀವ ಕಳೆ ಬಂದಿದೆ.
ಬೆಳಗಾವಿ, ಮೇ.14: ಬಿರು ಬೇಸಿಗೆಯಲ್ಲೂ ಗೋಕಾಕ್ ನ ಫಾಲ್ಸ್ (Gokak Falls) ಧುಮ್ಮಿಕ್ಕುತ್ತಿದ್ದು ಪ್ರವಾಸಿಗರನ್ನು ಸೆಳೆಯುತ್ತಿದೆ. ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್ ಹೊರ ವಲಯದಲ್ಲಿರುವ ಗೋಕಾಕ್ ಫಾಲ್ಸ್ ಧುಮ್ಮಿಕ್ಕುತ್ತಿದೆ. ಇದನ್ನು ನೋಡಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್ ಗೆ ಜೀವ ಕಳೆ ಬಂದಿದೆ. ಗೋಕಾಕ್ ಫಾಲ್ಸ್ ಜಲ ವೈಭವ ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಹಾರಿ ಹೋದ ಮನೆ ಮೇಲ್ಛಾವಣಿ.. ಬೈಕ್ ಜಖಂ
ಗಡಿನಾಡು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಮಳೆ ಅಬ್ಬರಿಸಿದೆ. ಗಾಳಿ, ಮಳೆಗೆ ಅವಾಂತರವೂ ಸಂಭವಿಸಿದ್ದು, 10ಕ್ಕೂ ಹೆಚ್ಚು ಮನೆಗಳ ಮೇಲ್ಚಾವಣಿ ಹಾರಿ ಹೋಗಿವೆ. ಇನ್ನೂ ಐದಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿವೆ. ವಿದ್ಯುತ್ ಕಂಬ ಬಿದ್ದು ಎರಡು ಬೈಕ್ಗಳು ಜಖಂಗೊಂಡಿವೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ