ಬೇಸಿಗೆಯಲ್ಲೂ ಮೈತುಂಬಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ಪ್ರವಾಸಿಗರ ದಂಡು

Edited By: ಆಯೇಷಾ ಬಾನು

Updated on: May 14, 2024 | 9:16 AM

ಳಗಾವಿ ಜಿಲ್ಲೆಯ ಗೋಕಾಕ್ ಹೊರ ವಲಯದಲ್ಲಿರುವ ಗೋಕಾಕ್ ಫಾಲ್ಸ್ ಧುಮ್ಮಿಕ್ಕುತ್ತಿದೆ. ಇದನ್ನು ನೋಡಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್ ಗೆ ಜೀವ ಕಳೆ ಬಂದಿದೆ.

ಬೆಳಗಾವಿ, ಮೇ.14: ಬಿರು ಬೇಸಿಗೆಯಲ್ಲೂ ಗೋಕಾಕ್ ನ ಫಾಲ್ಸ್ (Gokak Falls) ಧುಮ್ಮಿಕ್ಕುತ್ತಿದ್ದು ಪ್ರವಾಸಿಗರನ್ನು ಸೆಳೆಯುತ್ತಿದೆ. ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್ ಹೊರ ವಲಯದಲ್ಲಿರುವ ಗೋಕಾಕ್ ಫಾಲ್ಸ್ ಧುಮ್ಮಿಕ್ಕುತ್ತಿದೆ. ಇದನ್ನು ನೋಡಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್ ಗೆ ಜೀವ ಕಳೆ ಬಂದಿದೆ. ಗೋಕಾಕ್ ಫಾಲ್ಸ್ ಜಲ ವೈಭವ ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಹಾರಿ ಹೋದ ಮನೆ ಮೇಲ್ಛಾವಣಿ.. ಬೈಕ್ ಜಖಂ

ಗಡಿನಾಡು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಮಳೆ ಅಬ್ಬರಿಸಿದೆ. ಗಾಳಿ, ಮಳೆಗೆ ಅವಾಂತರವೂ ಸಂಭವಿಸಿದ್ದು, 10ಕ್ಕೂ ಹೆಚ್ಚು ಮನೆಗಳ ಮೇಲ್ಚಾವಣಿ ಹಾರಿ ಹೋಗಿವೆ. ಇನ್ನೂ ಐದಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿವೆ. ವಿದ್ಯುತ್ ಕಂಬ ಬಿದ್ದು ಎರಡು ಬೈಕ್​​​​ಗಳು ಜಖಂಗೊಂಡಿವೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: May 14, 2024 09:14 AM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More