AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಘಟ್ಟದಲ್ಲಿ ಮಳೆಯ ಅಬ್ಬರ: ಹಾಲ್ನೊರೆಯಂತೆ ಧುಮ್ಮಿಕ್ಕಿದ ಗೋಕಾಕ್ ಜಲಪಾತ

ಪಶ್ಚಿಮ ಘಟ್ಟದಲ್ಲಿ ಮಳೆಯ ಅಬ್ಬರ: ಹಾಲ್ನೊರೆಯಂತೆ ಧುಮ್ಮಿಕ್ಕಿದ ಗೋಕಾಕ್ ಜಲಪಾತ

ಸಹದೇವ್​ ಮಾನೆ
| Edited By: |

Updated on: Jul 30, 2026 | 3:48 PM

Share

Belagavi News: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ಇದರ ಪರಿಣಾಮವಾಗಿ ಗೋಕಾಕ್ ನಗರ-ಶಿಂಗಳಾಪುರ ನಡುವಿನ ಬ್ರಿಡ್ಜ್‌ ಕಮ್ ಬ್ಯಾರೇಜ್ ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾಗಿದೆ. ಪರ್ಯಾಯ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಳಗಾವಿ, ಜುಲೈ 30: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಮತ್ತು ಜಲಪಾತಗಳು ತುಂಬಿ ಹರಿಯುತ್ತಿವೆ. ಮಳೆಯ ಅಬ್ಬರಕ್ಕೆ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿರುವ ಪ್ರಸಿದ್ಧ ಗೋಕಾಕ್ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಭೋರ್ಗರೆಯುತ್ತಿದೆ. ಹೆಚ್ಚಿದ ನೀರಿನ ಮಟ್ಟದಿಂದಾಗಿ ಸ್ಥಳೀಯ ಜನಜೀವನಕ್ಕೆ ತೊಂದರೆಯಾಗಿದ್ದು, ಗೋಕಾಕ್ ನಗರ ಮತ್ತು ಶಿಂಗಳಾಪುರ ಗ್ರಾಮದ ನಡುವೆ ಇರುವ ಪ್ರಮುಖ ಬ್ರಿಡ್ಜ್‌ ಕಮ್ ಬ್ಯಾರೇಜ್ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us