Gokak Falls: ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ

Updated By: Ganapathi Sharma

Updated on: Aug 21, 2025 | 11:49 AM

ನೆರೆರಾಜ್ಯ ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಭಾರಿ ಮಳೆ ಆಗುತ್ತಿದ್ದು ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮವಾಗಿ ಗೋಕಾಕ್ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದೆ. ಭೋರ್ಗರೆದು ಹರಿಯುತ್ತಿರುವ ಗೋಕಾಕ್ ಜಲಪಾತದ ವಿಡಿಯೋ ಇಲ್ಲಿದೆ.

ಬೆಂಗಳೂರು, ಆಗಸ್ಟ್ 21: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವ್ಯಾಪಕ ಮಳೆ ಆಗುತ್ತಿದ್ದು, ಪರಿಣಾಮವಾಗಿ ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಬೆಳಗಾವಿಯ ಗೋಕಾಕ್ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಗೋಕಾಕ್ ಜಲಪಾತದ ರಮಣೀಯ ದೃಶ್ಯ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ