ಬಿರು ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ಸುಂದರ ದೃಶ್ಯ ಇಲ್ಲಿದೆ ನೋಡಿ
ಭಾರತದ ನಯಾಗರ ಫಾಲ್ಸ್ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಬಿರು ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ ಮಾಡಿರುವ ಕಾರಣ ಗೋಕಾಕ್ ಜಲಪಾತ ಮೈದುಂಬಿಕೊಂಡಿದ್ದು, ಪ್ರವಾಸಿಗರ ಕಣ್ಮನ ತಣಿಸುತ್ತಿದೆ. ತುಂಬಿ ಹರಿಯುತ್ತಿರುವ ಗೋಕಾಕ್ ಫಾಲ್ಸ್ ವಿಡಿಯೋ ಇಲ್ಲಿದೆ.
ಬೆಳಗಾವಿ, ಮಾರ್ಚ್ 31: ಸಚಿವ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡಲಾಗಿದೆ. ಇದರ ಪರಿಣಾಮವಾಗಿ ಗೋಕಾಕ್ ಹೊರ ವಲಯದಲ್ಲಿರುವ ಫಾಲ್ಸ್ ಮೈದುಂಬಿ ಧುಮ್ಮಿಕ್ಕಿ ಹರಿಯುತ್ತಿದೆ. ಬಂಡೆಗಲ್ಲಿನ ಮಧ್ಯೆ ಹರಿದು ಬಂದು ಹಾಲಿನ ನೊರೆಯಂತೆ ಹರಿಯುತ್ತಿರುವ ನೀರು ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.
ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ ಹಿನ್ನೆಲೆ. ಜನರಿಗೆ, ಜಾನುವಾರುಗಳಿಗೆ ನೀರಿನ ಅವಶ್ಯಕತೆ ಹಿನ್ನೆಲೆ ಜಲಾಶಯದಿಂದ ನೀರು ಬಿಡುವಂತೆ ಸಚಿವರು ಸೂಚನೆ ನೀಡಿದ್ದರು.