AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು

ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Jun 09, 2026 | 9:40 AM

Share

ಗೋಕರ್ಣದ ಪ್ರಸಿದ್ಧ ಮಹಾಬಲೇಶ್ವರ ದೇಗುಲವು ಮಳೆಯಿಂದಾಗಿ ಕೊಳಚೆ ನೀರಿನಿಂದ ಆವೃತವಾಗಿದೆ. ಆತ್ಮಲಿಂಗವೂ ಸಹ ಕೊಳಚೆ ನೀರಿನಲ್ಲಿ ಮುಳುಗಿದ್ದು, ಇದು ಕಳೆದ ಎರಡು ವರ್ಷಗಳಿಂದ ಪುನರಾವರ್ತನೆಯಾಗುತ್ತಿರುವ ಸಮಸ್ಯೆಯಾಗಿದೆ. ದೇಗುಲದ ಸುತ್ತಲಿನ ಒತ್ತುವರಿ ಹಾಗೂ ಶೌಚಾಲಯದ ನೀರನ್ನು ಸಮುದ್ರಕ್ಕೆ ಬಿಡುತ್ತಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯವೂ ಎದ್ದು ಕಾಣುತ್ತಿದೆ.

ಕಾರವಾರ, ಜೂನ್ 9: ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಐತಿಹಾಸಿಕ ಮಹಾಬಲೇಶ್ವರ ದೇಗುಲದಲ್ಲಿ ಕೊಳಚೆ ನೀರು ತುಂಬಿಕೊಂಡಿದೆ. ದೇಗುಲದ ಗರ್ಭಗುಡಿಯಲ್ಲಿರುವ ಮಹಾಬಲೇಶ್ವರನ ಆತ್ಮಲಿಂಗ ಕೂಡ ಸಂಪೂರ್ಣವಾಗಿ ಕೊಳಚೆ ನೀರಿನಲ್ಲಿ ಮುಳುಗಿದೆ. ಇದು ಭಕ್ತರಲ್ಲಿ ತೀವ್ರ ಆತಂಕ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ. ದೇಗುಲದ ಅಕ್ಕಪಕ್ಕದ ಶೌಚಾಲಯಗಳು ಮತ್ತು ಇತರೆ ಭಾಗಗಳಿಂದ ಕೊಳಚೆ ನೀರು ಗರ್ಭಗುಡಿಗೆ ನುಗ್ಗಿದೆ. ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ಕೊಳಚೆ ನೀರು ನುಗ್ಗುತ್ತಿರುವುದು ಇದೇನು ಮೊದಲ ಸಲವಲ್ಲ. ಈ ಹಿಂದೆ ಕೂಡ ಇದೇ ರೀತಿಯ ಸಮಸ್ಯೆ ಎದುರಾಗಿತ್ತು.

ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡಗಳ ಒತ್ತುವರಿ ಮತ್ತು ಶೌಚಾಲಯದ ನೀರನ್ನು ನೇರವಾಗಿ ಸಮುದ್ರಕ್ಕೆ ಹರಿಸುತ್ತಿರುವುದೇ ಈ ಸಮಸ್ಯೆಗೆ ಮೂಲ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಈ ಪರಿಸ್ಥಿತಿಗೆ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಮೇಲುಸ್ತುವಾರಿ ಸಮಿತಿಯ ನಿರ್ಲಕ್ಷ್ಯವೇ ಕಾರಣ ಎಂದು ಭಕ್ತರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಿರ್ಲಕ್ಷ್ಯವನ್ನು ಕೂಡಲೇ ಸರಿಪಡಿಸಿ ದೇಗುಲದ ಪಾವಿತ್ರ್ಯವನ್ನು ಕಾಪಾಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 09, 2026 07:11 AM

Follow Us