ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದ್ದೇಕೆ? ಇನ್ನೂ ಇಳಿಕೆಯಾಗುತ್ತಾ ಬಂಗಾರದ ರೇಟ್? ಇಲ್ಲಿದೆ ತಜ್ಞರ ವಿವರಣೆ
ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಅಮೆರಿಕದಲ್ಲಿ ಹಣದುಬ್ಬರ ನಿಯಂತ್ರಿಸಲು ಬಡ್ಡಿದರ ಹೆಚ್ಚಳದ ನಿರೀಕ್ಷೆಯೇ ಇದಕ್ಕೆ ಪ್ರಮುಖ ಕಾರಣ ಎಂದು ತಜ್ಞರು ಹೇಳುತ್ತಾರೆ. ಬಡ್ಡಿದರ ಏರಿಕೆಯಿಂದ ಹೂಡಿಕೆದಾರರು ಬಂಗಾರವನ್ನು ಮಾರಾಟ ಮಾಡಿ ಬಾಂಡ್ಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡಿ ದರ ಇಳಿಕೆಗೆ ಕಾರಣವಾಗಿದೆ ಎನ್ನಲಾಗ್ತಿದೆ.
ಬೆಂಗಳೂರು, ನವೆಂಬರ್ 20: ಚಿನ್ನದ ಬೆಲೆ ಗಣನೀಯವಾಗಿ ಇಳಿಕೆ ಕಂಡಿದ್ದು, ಚಿನ್ನದ ಪ್ರಿಯರಿಗೆ ಇದು ಸಿಹಿ ಸುದ್ದಿಯಾಗಿದೆ. ಯುದ್ಧದ ಸಮಯದಲ್ಲಿ ಪ್ರತಿ 10 ಗ್ರಾಂ ಚಿನ್ನಕ್ಕೆ ₹1,80,000 ತಲುಪಿದ್ದ ಬೆಲೆ ಈಗ ದಾಖಲೆಯ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯು ಶೇಕಡಾ 65ರಷ್ಟು ಕುಸಿದಿದೆ. ಅಮೆರಿಕದಲ್ಲಿ ಹೆಚ್ಚುತ್ತಿರುವ ಹಣದುಬ್ಬರವೂ ಚಿನ್ನದ ಬೆಲೆ ಮೇಲೆ ಪರಿಣಾಮ ಬೀರಿದೆ ಎಂದು ತಜ್ಞರು ತಿಳಿಸಿದ್ದಾರೆ. ಬಡ್ಡಿದರಗಳು ಹೆಚ್ಚಾದಾಗ, ಹೂಡಿಕೆದಾರರು ತಮ್ಮ ಅನುತ್ಪಾದಕ ಚಿನ್ನದ ಹೂಡಿಕೆಗಳನ್ನು ಮಾರಾಟ ಮಾಡಿ, ನಿಶ್ಚಿತ ಆದಾಯ ನೀಡುವ ಬಾಂಡ್ಗಳಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸುತ್ತಾರೆ. ಇದರಿಂದ ಚಿನ್ನದ ಬೇಡಿಕೆ ಕಡಿಮೆಯಾಗಿ ಬೆಲೆ ಇಳಿಯುತ್ತದೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

