ಕುಟುಂಬದಲ್ಲಿ ತುರ್ತು ಪರಿಸ್ಥಿತಿ; ಬಿಗ್ ಬಾಸ್ನಿಂದ ಹೊರಬಂದ ಗೋಲ್ಡ್ ಸುರೇಶ್
ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ ಆಟವನ್ನು ಅರ್ಧಕ್ಕೆ ನಿಲ್ಲಿಸಿ ಹೊರಗೆ ಬಂದಿದ್ದಾರೆ. ಕುಟುಂಬದಲ್ಲಿನ ಅನಿವಾರ್ಯ ಕಾರಣದಿಂದ ಅವರು ಈ ಶೋಗೆ ವಿದಾಯ ಹೇಳಿದ್ದಾರೆ. ಇನ್ನುಳಿದ ಸದಸ್ಯರು ಸುರೇಶ್ಗೆ ಧೈರ್ಯ ತುಂಬಿದ್ದಾರೆ. ಇಷ್ಟು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದ ಸುರೇಶ್ ಅವರು ಈಗ ಆತಂಕದಲ್ಲಿ ಹೊರನಡೆದಿದ್ದಾರೆ.
ಈ ವಾರ ಗೋಲ್ಡ್ ಸುರೇಶ್ ಕ್ಯಾಪ್ಟನ್ ಆಗಿದ್ದರು. ಅಲ್ಲದೇ, ಅವರಿಗೆ ‘ಉತ್ತಮ’ ಪಟ್ಟ ಕೂಡ ಸಿಕ್ಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬರುವಂತಾಗಿದೆ. ‘ಗೋಲ್ಡ್ ಸುರೇಶ್ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ಅವರ ಅವಶ್ಯಕತೆ ಬಿಗ್ ಬಾಸ್ ಮನೆಯಿಂದ ಅವರ ಕುಟುಂಬದವರಿಗೆ ಜಾಸ್ತಿ ಇದೆ. ಹೆಚ್ಚು ತಡ ಮಾಡದೇ ವಸ್ತುಗಳನ್ನು ಪ್ಯಾಕ್ ಮಾಡಿಕೊಂಡು ಕೂಡಲೇ ಬಿಗ್ ಬಾಸ್ ಮನೆಯಿಂದ ಹೊರಗೆ ಬನ್ನಿ’ ಎಂದು ಸೂಚನೆ ನೀಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos