ಕುಟುಂಬದಲ್ಲಿ ತುರ್ತು ಪರಿಸ್ಥಿತಿ; ಬಿಗ್ ಬಾಸ್​ನಿಂದ ಹೊರಬಂದ ಗೋಲ್ಡ್ ಸುರೇಶ್

|

Updated on: Dec 15, 2024 | 4:00 PM

ಗೋಲ್ಡ್​ ಸುರೇಶ್ ಅವರು ಬಿಗ್ ಬಾಸ್​ ಆಟವನ್ನು ಅರ್ಧಕ್ಕೆ ನಿಲ್ಲಿಸಿ ಹೊರಗೆ ಬಂದಿದ್ದಾರೆ. ಕುಟುಂಬದಲ್ಲಿನ ಅನಿವಾರ್ಯ ಕಾರಣದಿಂದ ಅವರು ಈ ಶೋಗೆ ವಿದಾಯ ಹೇಳಿದ್ದಾರೆ. ಇನ್ನುಳಿದ ಸದಸ್ಯರು ಸುರೇಶ್​ಗೆ ಧೈರ್ಯ ತುಂಬಿದ್ದಾರೆ. ಇಷ್ಟು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದ ಸುರೇಶ್ ಅವರು ಈಗ ಆತಂಕದಲ್ಲಿ ಹೊರನಡೆದಿದ್ದಾರೆ.

ಈ ವಾರ ಗೋಲ್ಡ್ ಸುರೇಶ್ ಕ್ಯಾಪ್ಟನ್ ಆಗಿದ್ದರು. ಅಲ್ಲದೇ, ಅವರಿಗೆ ‘ಉತ್ತಮ’ ಪಟ್ಟ ಕೂಡ ಸಿಕ್ಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬರುವಂತಾಗಿದೆ. ‘ಗೋಲ್ಡ್ ಸುರೇಶ್​ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ಅವರ ಅವಶ್ಯಕತೆ ಬಿಗ್ ಬಾಸ್​ ಮನೆಯಿಂದ ಅವರ ಕುಟುಂಬದವರಿಗೆ ಜಾಸ್ತಿ ಇದೆ. ಹೆಚ್ಚು ತಡ ಮಾಡದೇ ವಸ್ತುಗಳನ್ನು ಪ್ಯಾಕ್​ ಮಾಡಿಕೊಂಡು ಕೂಡಲೇ ಬಿಗ್ ಬಾಸ್​ ಮನೆಯಿಂದ ಹೊರಗೆ ಬನ್ನಿ’ ಎಂದು ಸೂಚನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.