ಮೋಕ್ಷಿತಾ ಪೈ ಹಳೇ ಕೇಸ್​ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

Edited By:

Updated on: Dec 19, 2024 | 8:55 PM

ಮೋಕ್ಷಿತಾ ಪೈ ಅವರು ಅಪಹರಣದ ಕೇಸ್​ನಲ್ಲಿ ಸಿಲುಕಿಕೊಂಡಿದ್ದರು ಎಂಬ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ. ಆ ಬಗ್ಗೆ ಗೋಲ್ಡ್ ಸುರೇಶ್ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಿಂದ ಗೋಲ್ಡ್ ಸುರೇಶ್ ಅವರು ಅನಿವಾರ್ಯ ಕಾರಣದಿಂದ ಹೊರಗೆ ಬಂದಿದ್ದು, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಬಿಗ್ ಬಾಸ್ ಸ್ಪರ್ಧಿಗಳ ಹಳೇ ಕೇಸ್​ಗಳನ್ನು ಕೆಲವರು ಮತ್ತೆ ಕೆದಕುತ್ತಿದ್ದಾರೆ. ಅಂಥವರ ಬಗ್ಗೆ ಗೋಲ್ಡ್ ಸುರೇಶ್​ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಕಿಡ್ನಾಪ್ ಕೇಸ್​ನಲ್ಲಿ ಮೋಕ್ಷಿತಾ ಹೆಸರು ತಣುಕು ಹಾಕಿಕೊಂಡಿತ್ತು. ಆ ವಿಚಾರವನ್ನು ಮತ್ತೆ ಮುನ್ನೆಲೆಗೆ ತರಲಾಗಿದೆ. ‘ಕೆಲಸ ಇಲ್ಲದವರು ಕಮೆಂಟ್ ಮಾಡುತ್ತಾರೆ. ಕಮೆಂಟ್ ಓದುವುದು ನಮ್ಮ ಕೆಲಸ ಅಲ್ಲ. ಕಮೆಂಟ್ ಮಾಡುವವರು ಅಲ್ಲೇ ಇರುತ್ತಾರೆ. ಕೆಲಸ ಮಾಡುವವರು ಮುಂದೆ ಹೋಗುತ್ತಾರೆ’ ಎಂದು ಗೋಲ್ಡ್ ಸುರೇಶ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 19, 2024 08:39 PM
Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More