ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ!
ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಪಾರ ಪ್ರಮಾಣದ ಚಿನ್ನದ ನಿಧಿ ಪತ್ತೆಯಾಗಿತ್ತು. ಮನೆ ಪಾಯ ತೆಗೆಯುವಾಗ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಅದನ್ನು ಬಾಲಕ ಪ್ರಜ್ವಲ್ ಬಸವರಾಜ್ ರಿತ್ತಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದು, ಆತನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಅದನ್ನು ಬಾಲಕ ಪ್ರಜ್ವಲ್ ಬಸವರಾಜ್ ರಿತ್ತಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದು, ಆತನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಇಲಾಖೆಯಿಂದ ಪಂಚನಾಮೆ ಕ್ರಮ ಜರುಗಿಸಿ, ದೊರೆತ ಬಂಗಾರದ ಆಭರಣಗಳನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ತಾಯಿ-ಮಗನ ಈ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ, ಜಿಲ್ಲಾ ಆಡಳಿತದ ವತಿಯಿಂದ ಅವರನ್ನು ಸನ್ಮಾನಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮತ್ತು ಅಬಕಾರಿ ಜಿಲ್ಲಾಧಿಕಾರಿ ಶ್ರೀ ದುರ್ಗೇಶ್ ಅವರು ಪ್ರಜ್ವಲ್‌ಗೆ ಶಾಲು ಹಾಕಿ ಗೌರವಿಸಿದ್ದು, ವಿಷಯವನ್ನು ಸರ್ಕಾರದ ಗಮನಕ್ಕೆ ತಂದ ಗ್ರಾಮ ಪಂಚಾಯತ್ ಸದಸ್ಯೆ ರಜಿಯಾ ಬೇಗಂ ಅವರಿಗೂ ಸನ್ಮಾನ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

