Video: ಒಳಉಡುಪಿನಲ್ಲಿ ಕೆಜಿಗಟ್ಟಲೇ ಚಿನ್ನ ಕಂಡು ಬೆಚ್ಚಿಬಿದ್ದ ಪೊಲೀಸರು! ವಿಡಿಯೋ ನೋಡಿ

Updated on: Jul 06, 2023 | 7:42 AM

ಹೈದ್ರಾಬಾದ್ ಏರ್​​ಪೋರ್ಟ್​ ​ ಪೊಲೀಸ್​​ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಒಳಉಡುಪಿನಲ್ಲಿ ಕೆಜಿಗಟ್ಟಲೇ ಚಿನ್ನ ಅಡಗಿಸಿಕೊಂಡು ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ.

ಹೈದ್ರಾಬಾದ್ : ಹೈದ್ರಾಬಾದ್ ಏರ್​​ಪೋರ್ಟ್​ ​ ಪೊಲೀಸ್​​ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ವಿದೇಶದಿಂದ ಬಂದಂತಹ ಇಬ್ಬರು ವ್ಯಕ್ತಿಗಳು ಬರೋಬ್ಬರಿ 2 ಕೆಜಿ 279 ಗ್ರಾಂ ಬಂಗಾರವನ್ನು ಅಕ್ರಮವಾಗಿ ಸಾಗಿಸಲು ಮುಂದಾಗಿದ್ರು. ಈ ವೇಳೆ ಇಬ್ಬರನ್ನು ಪರಿಶೀಲಿಸಿದಾಗ ಓರ್ವ ವ್ಯಕ್ತಿ ಪುರುಷರು ಧರಿಸುವ ಒಳ ಉಡುಪಿನಲ್ಲಿ 20 ಲಕ್ಷ ರೂ. ಮೌಲ್ಯದ ಬಂಗಾರ ಅಡಗಿಸಿದ್ರೆ, ಮತ್ತೊಬ್ಬ ವಿಮಾನದ ಸೀಟ್​ನಲ್ಲಿ ಅಡಗಿಸಿದ್ದ 72 ಲಕ್ಷ ರೂ. ಮೌಲ್ಯದ 1 ಕೆಜಿಗೂ ಹೆಚ್ಚು ಬಂಗಾರವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More