‘ಬಾನ ದಾರಿಯಲ್ಲಿ’: ಕೀನ್ಯ ದೇಶದಲ್ಲಿ ಎದುರಿಸಿದ ಸಂಕಷ್ಟಗಳ ವಿವರಿಸಿದ ಗಣೇಶ್

Updated on: Sep 06, 2023 | 9:08 PM

Baana Daariyalli: ಗಣೇಶ್ ನಟನೆಯ 'ಬಾನ ದಾರಿಯಲ್ಲಿ' ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಕೀನ್ಯಾ ಸೇರಿದಂತೆ ಹಲವು ಸುಂದರ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಕೀನ್ಯಾನಲ್ಲಿ ಚಿತ್ರೀಕರಣ ಮಾಡುವಾಗ ಚಿತ್ರತಂಡ ಅನುಭವಿಸಿದ ಕಷ್ಟಗಳ ಬಗ್ಗೆ ಗಣೇಶ್ ವಿವರಿಸಿದ್ದಾರೆ.

ಗಣೇಶ್ (Ganesh) ನಟನೆಯ ‘ಬಾನ ದಾರಿಯಲ್ಲಿ‘ (Baana Daariyalli) ಸಿನಿಮಾದ ಟ್ರೈಲರ್ ನಿನ್ನೆ (ಸೆಪ್ಟೆಂಬರ್ 06) ಬಿಡುಗಡೆ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಗಣೇಶ್, ಈ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಅನುಭವಿಸಿದ ಕಷ್ಟಗಳನ್ನು ವಿವರಿಸಿದ್ದಾರೆ. ವಿಶೇಷವಾಗಿ ಕೀನ್ಯಾನಲ್ಲಿ ಚಿತ್ರೀಕರಣ ಮಾಡುವಾಗ ಪಟ್ಟ ಕಷ್ಟಗಳನ್ನು ತಮ್ಮದೇ ರೀತಿಯಲ್ಲಿ ಗಣೇಶ್ ವಿವರಿಸಿದ್ದು, ಡಿಓಪಿ ಹಾಗೂ ಅವರ ತಂಡ ಎಷ್ಟು ಕಷ್ಟಪಟ್ಟು ಕೀನ್ಯಾದ ಸುಂದರ ತಾಣಗಳನ್ನು ಸೆರೆಹಿಡಿದಿದೆ ಎಂದು ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More