ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್

Updated on: Jul 06, 2026 | 7:50 PM

ಮುಖ್ಯಾಂಶಗಳು

  • ‘ಪಿನಾಕ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಗಣೇಶ್.
  • ‘ಗೋಲ್ಡನ್ ಸ್ಟಾರ್’ ವೃತ್ತಿಜೀವನದಲ್ಲಿ ಡಿಫರೆಂಟ್ ಆಗಿರಲಿದೆ ಈ ಚಿತ್ರ.
  • ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಮೂಲಕ ನಿರ್ಮಾಣ ಆಗಿರುವ ಸಿನಿಮಾ.

‘ಗೋಲ್ಡನ್ ಸ್ಟಾರ್’ ಗಣೇಶ್ ನಟನೆಯ ‘ಪಿನಾಕ’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಚಿತ್ರದ ಥೀಮ್​ಗೆ ಅನುಗುಣವಾಗಿ ಗಣೇಶ್ ಅವರು ಖಡ್ಗ ಎತ್ತಿ ಹಿಡಿಯುವ ಮೂಲಕ ಟೀಸರ್ ಅನಾವರಣ ಮಾಡಿದರು. ಈ ವೇಳೆ ರಂಗಾಯಣ ರಘು, ಸಾಧು ಕೋಕಿಲ, ನಿರ್ದೇಶಕ ಧನಂಜಯ್ ಮುಂತಾದವರು ಹಾಜರಿದ್ದರು.

‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ನಟನೆಯ ‘ಪಿನಾಕ’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಚಿತ್ರದ ಥೀಮ್​ಗೆ ಅನುಗುಣವಾಗಿ ಗಣೇಶ್ ಅವರು ಖಡ್ಗ ಎತ್ತಿ ಹಿಡಿಯುವ ಮೂಲಕ ಟೀಸರ್ ಅನಾವರಣ ಮಾಡಿದರು. ಈ ವೇಳೆ ರಂಗಾಯಣ ರಘು, ಸಾಧು ಕೋಕಿಲ, ನಿರ್ದೇಶಕ ಧನಂಜಯ್ ಮುಂತಾದವರು ಹಾಜರಿದ್ದರು. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಮೂಲಕ ವಿಶ್ವಪ್ರಸಾದ್ ಅವರು ‘ಪಿನಾಕ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಕ್ಟೋಬರ್ 2ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಖಾಸಗಿ ಶಾಲೆಯೊಂದರಲ್ಲಿ ಸಾವಿರಾರು ಮಕ್ಕಳೊಂದಿಗೆ ಗಣೇಶ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ವೇಳೆ ಟೀಸರ್ ರಿಲೀಸ್ ಮಾಡಲಾಯಿತು. ಈ ಸಿನಿಮಾದ ಕ್ಲೈಮ್ಯಾಕ್ಸ್ ಬಹಳ ವಿಶೇಷವಾಗಿರಲಿದೆ ಎಂದು ಗಣೇಶ್ ಅವರು ಹೇಳಿದರು. ‘ಚಿತ್ರೀಕರಣದಲ್ಲಿ ಸಾವಿರಾರು ಜನರು ಭಾಗಿಯಾಗುತ್ತಿದ್ದರು. ‘ನಾನು ಈವರೆಗೂ ಯಾವ ಚಿತ್ರದಲ್ಲೂ ನೋಡಿರದ ಕ್ಲೈಮ್ಯಾಕ್ಸ್ ಈ ಸಿನಿಮಾದಲ್ಲಿದೆ ಎನ್ನಬಹುದು’ ಎಂದು ಹೇಳುವ ಮೂಲಕ ಗಣೇಶ್ ಅವರು ಕುತೂಹಲ ಹೆಚ್ಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More