ಯುಗಾದಿಗೆ ಗಣೇಶ್ ಕಡೆಯಿಂದ ಸಿಗಲಿದೆ ದೊಡ್ಡ ಸರ್​ಪ್ರೈಸ್

Updated on: Mar 18, 2026 | 8:37 AM

ಯುಗಾದಿ ಹಬ್ಬ ಹಿಂದೂಗಳ ಪಾಲಿಗೆ ಹೊಸ ವರ್ಷ. ಈ ವಿಶೇಷ ದಿನಂದು ಸಾಕಷ್ಟು ಹೊಸ ಸಿನಿಮಾಗಳು ಅನೌನ್ಸ್ ಆಗುತ್ತವೆ. ಈಗ ಗೋಲ್ಡನ್ ಸ್ಟಾರ್ ಗಣೇಶ್ ಅವರ ಕಡೆಯಿಂದಲೂ ಯುಗಾದಿಗೆ ಹೊಸ ಸುದ್ದಿ ಸಿಗುತ್ತಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಆ ಬಗ್ಗೆ ಇಲ್ಲಿದೆ ವಿವರ.

ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ಯುಗಾದಿ, ಹೊಸ ವರ್ಷ ಮಾತ್ರ ಅಲ್ಲ, ಹೊಸ ಟೈಟಲ್, ಹೊಸ ಸಂಚಲನ, ಹೊಸ ಸಿನಿಮಾ, ಹಲವು ತಿಂಗಳ ಪರಿಶ್ರಮ, ಅನೇಕ ಕನಸುಗಳ ಶ್ರಮ’ ಎಂದು ಕ್ಯಾಪ್ಶನ್ ಹಾಕಿದ್ದಾರೆ. ಈ ವಿಡಿಯೋದಲ್ಲಿ ಮಂಜು ಪಾವಗಡ ಟೈಟಲ್ ಹೇಳಿ ಅಂತ ದುಂಬಾಲು ಬೀಳ್ತಾರೆ. ಕೊನೆಗೆ ಗಣೇಶ್ ಬಳಿಯೂ ಬರ್ತಾರೆ. ಯುಗಾದಿಗೆ ಟೈಟಲ್ ಹೇಳೋದಾಗಿ ಅವರು ತಿಳಿಸ್ತಾರೆ. ಇದರಿಂದ ಯುಗಾದಿಗೆ ಸರ್​​ಪ್ರೈಸ್ ಸಿಗೋದು ಪಕ್ಕಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More