ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್

Updated on: Jul 07, 2025 | 9:44 PM

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಮಾತನಾಡಿದರು. ‘ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ. ಭಾಷೆ ಉಳಿದರೆ ಮಾತ್ರ ನಾವು ಉಳಿಯೋದು. ಭಾಷೆಯೇ ಇಲ್ಲ ಎಂದರೆ ನಾವು ಏನು ಮಾಡೋಕೆ ಆಗಲ್ಲ’ ಎಂದು ಗಣೇಶ್ ಅವರು ಹೇಳಿದ್ದಾರೆ.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ (Nidra Devi Next Door) ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ಮಾತನಾಡಿದರು. ‘ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ. ಭಾಷೆ ಉಳಿದರೆ ಮಾತ್ರ ನಾವು ಉಳಿಯೋದು. ಭಾಷೆಯೇ ಇಲ್ಲ ಎಂದರೆ ನಾವು ಏನು ಮಾಡೋಕೆ ಆಗುವುದಿಲ್ಲ. ನಮ್ಮ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ನಮ್ಮಂಥವರು ಸಾವಿರಾರು ಜನರು ಬಂದು ಹೋಗುತ್ತಾರೆ. ಉಳಿಯುವುದು ಭಾಷೆ ಒಂದೇ’ ಎಂದು ಗಣೇಶ್ (Ganesh) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More