‘ನಿಮ್ಮ ಹಕ್ಕನ್ನು ಚಲಾಯಿಸಿ’; ವೋಟ್ ಮಾಡಿದ ಬಳಿಕ ಮನವಿ ಮಾಡಿದ ಗಣೇಶ್

|

Updated on: Apr 26, 2024 | 8:47 AM

ಗಣೇಶ್ ಅವರು ವೋಟ್ ಹಾಕಿದ್ದಾರೆ. ‘ಮತ ಹಾಕೋದು ನನ್ನ ಜವಾಬ್ದಾರಿ. ನನ್ನ ಹಕ್ಕನ್ನು ಚಲಾಯಿಸಿದ್ದೀನಿ. ನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿ. ಎಲ್ಲರೂ ವೋಟ್ ಹಾಕಿ’ ಎಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ ಗಣೇಶ್.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತಾದನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಬೆಂಗಳೂರಿನಲ್ಲೂ ಇಂದು ಮತದಾನ ನಡೆಯುತ್ತಿದೆ. ಗೋಲ್ಡನ್ ಸ್ಟಾರ್ ಗಣೇಶ್ (Ganesh) ಹಾಗೂ ಅವರ ಪತ್ನಿ ಶಿಲ್ಪಾ ಗಣೇಶ್ ಅವರು ಮತದಾನ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ಮತ ಹಾಕೋದು ನನ್ನ ಜವಾಬ್ದಾರಿ. ನನ್ನ ಹಕ್ಕನ್ನು ಚಲಾಯಿಸಿದ್ದೀನಿ. ನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿ. ಎಲ್ಲರೂ ವೋಟ್ ಹಾಕಿ. ಯಾವುದಾದರೂ ಕೆಲಸ ಆಗಿಲ್ಲ ಎಂದು ಕೇಳಬೇಕು ಎಂದರೆ ವೋಟ್ ಹಾಕಬೇಕು, ವೋಟ್ ಹಾಕಿ ಕೇಳಿದರೆ ಅದರ ಬೆಲೆ ಜಾಸ್ತಿ ಇರುತ್ತದೆ’ ಎಂದಿದ್ದಾರೆ ಗಣೇಶ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 26, 2024 08:46 AM