ಗತವೈಭವ: ಹೊಸ ಹೀರೋ ಸಿನಿಮಾಗೆ ಬೆಂಬಲ ನೀಡಿದ ಗೋಲ್ಡನ್ ಸ್ಟಾರ್ ಗಣೇಶ್
ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ಹುಡುಗರ ಬೆನ್ನು ತಟ್ಟುತ್ತಾರೆ. ಈಗ ಅವರು ‘ಗತವೈಭವ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹೊಸ ನಟ ದುಷ್ಯಂತ್ ಅವರು ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ.
ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ಹೊಸ ಹುಡುಗರ ಬೆನ್ನು ತಟ್ಟುತ್ತಾರೆ. ಈಗ ಅವರು ‘ಗತವೈಭವ’ (Gatha Vaibhava) ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹೊಸ ನಟ ದುಷ್ಯಂತ್ (Dushyanth) ಅವರು ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ನವೆಂಬರ್ 14ರಂದು ಬಿಡುಗಡೆ ಆಗಿರುವ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ಅವರು ಅಭಿನಯಿಸಿದ್ದಾರೆ. ‘ಗತವೈಭವದ ಸೀನ್ ನಂಬರ್ 1ರಿಂದ ಕ್ಲೈಮ್ಯಾಕ್ಸ್ ತನಕ ನನಗೆ ಚೆನ್ನಾಗಿ ಗೊತ್ತು. ಸುನಿ ಇರುವ ರೀತಿಯೇ ಸ್ಕ್ರಿಪ್ಟ್ ಕೂಡ ಅಷ್ಟೇ ಚೆನ್ನಾಗಿ ಇರುತ್ತದೆ. ಈ ಸಿನಿಮಾದ ಶೋ ರೀಲ್ ನೋಡಿದಾಗ ತುಂಬಾ ಅದ್ದೂರಿಯಾಗಿ ಮಾಡಿದ್ದಾರೆ ಅಂತ ನನಗೆ ಗೊತ್ತಾಯಿತು. ಹೊಸ ಹೀರೋ ದುಷ್ಯಂತ್ ಅವರು ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ. ಛಾಯಾಗ್ರಹಣ ಬಹಳ ಚೆನ್ನಾಗಿದೆ. ಸುನಿ ಮತ್ತು ಅವರ ಇಡೀ ತಂಡಕ್ಕೆ ನನ್ನ ಕಡೆಯಿಂದ ಆಲ್ ದಿ ಬೆಸ್ಟ್’ ಎಂದು ಗಣೇಶ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.