ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: 1 ಲೀಟರ್ ಹಾಲಿಗೆ ಪ್ರೋತ್ಸಾಧನ 7 ರೂ.ಗೆ ಏರಿಕೆ, ಸಿದ್ದರಾಮಯ್ಯ ಘೋಷಣೆ

Edited By:

Updated on: Dec 19, 2025 | 12:09 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಪ್ರತಿ ಲೀಟರ್ ಹಾಲಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರಸ್ತುತ 5 ರೂಪಾಯಿಯಿಂದ 7 ರೂಪಾಯಿಗೆ ಏರಿಕೆ ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದರು. ರೈತರಿಗೆ ನೆರವಾಗಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ತಮ್ಮ ಸರ್ಕಾರದ ಹಿಂದಿನ ಹಾಗೂ ಪ್ರಸ್ತುತ ಅವಧಿಯ ಪ್ರಣಾಳಿಕೆ ಭರವಸೆಗಳ ಈಡೇರಿಕೆಯ ಕುರಿತು ಸಹ ಅವರು ಮಾಹಿತಿ ನೀಡಿದರು.

ಬೆಳಗಾವಿ, ಡಿಸೆಂಬರ್ 19: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು.

ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು. ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಈಡೇರಿಸಲಾಗುವುದು ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More