ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ಇನ್ಮುಂದೆ ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್; ನಂಬಿಕೆ ನಕ್ಷೆ 2.0ಗೆ ಚಾಲನೆ

Edited By:

Updated on: Sep 19, 2026 | 10:44 PM

ಸಚಿವ ಕೃಷ್ಣಬೈರೇಗೌಡ 4000 ಚದರ ಅಡಿವರೆಗಿನ ಮನೆಗಳ ಕಟ್ಟಡ ಯೋಜನಾ ಅನುಮೋದನೆಗಾಗಿ ಹೊಸ ಸ್ವಯಂಚಾಲಿತ ವ್ಯವಸ್ಥೆಯನ್ನು ಪ್ರಕಟಿಸಿದ್ದಾರೆ. ಇದು ಈ ಹಿಂದೆ 2-3 ತಿಂಗಳು ತೆಗೆದುಕೊಳ್ಳುತ್ತಿದ್ದ ಪ್ರಕ್ರಿಯೆಯನ್ನು 15-30 ನಿಮಿಷಗಳಿಗೆ ಇಳಿಸಲಿದೆ. ಟ್ರಸ್ಟ್ ಅಂಡ್ ವೆರಿಫೈ ತತ್ವದಡಿ ಆರಂಭವಾಗಿರುವ ಈ ಡಿಜಿಟಲ್ ಪರಿಹಾರವು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಿದ್ದು, ಆರಂಭದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ.

ಬೆಂಗಳೂರು, ಸೆಪ್ಟೆಂಬರ್​​ 19: ‘2024ರಲ್ಲಿ ನಂಬಿಕೆ ನಕ್ಷೆಗೆ ಅಂದು ಡಿಕೆ ಶಿವಕುಮಾರ್​ ಚಾಲನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಇದೀಗ ಅದನ್ನು ಇನ್ನಷ್ಟು ಸುಧಾರಣೆ ಮಾಡಲಾಗಿದೆ. ಇಂದಿನಿಂದಲೇ ಸುಧಾರಿತ ನಂಬಿಕೆ ನಕ್ಷೆ 2.0 ಚಾಲನೆಗೆ ಬರಲಿದೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘2-3 ತಿಂಗಳು ತೆಗೆದುಕೊಳ್ಳುತ್ತಿದ್ದ ಪ್ಲಾನ್ ಅನುಮೋದನೆ ಸಮಯವನ್ನು ಕೇವಲ 15-30 ನಿಮಿಷಗಳಲ್ಲಿ ಲಭ್ಯವಾಗಲಿದೆ. ಈ ನಂಬಿಕೆ ನಕ್ಷೆ ಉಪಕ್ರಮವು ಜನರಿಗೆ ಸರ್ಕಾರದ ವ್ಯವಸ್ಥೆಗಳ ಮೇಲಿನ ನಂಬಿಕೆಯನ್ನು ಹೆಚ್ಚಿಸುವ ಪ್ರಯತ್ನವಾಗಿದೆ’ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More