ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ, ಈ ಬಾರಿ ಕಾಂಗ್ರೆಸ್​ಗೆ 20 ಸ್ಥಾನ ದೊರಕಲಿವೆ: ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಂತು ಹೋಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವುದಕ್ಕೆ ಉತ್ತರಿಸಿದ ಅವರು, ಅವರೇನು ಜ್ಯೋತಿಷಿಯಾ? ಎಂದು ಕೇಳಿದರು. ಈಗಿನ ಅವಧಿಯ ನಂತರ ಮುಂದಿನ ಅವಧಿಗೂ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಮತ್ತು ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಹೇಳಿದರು.

ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ, ಈ ಬಾರಿ ಕಾಂಗ್ರೆಸ್​ಗೆ 20 ಸ್ಥಾನ ದೊರಕಲಿವೆ: ಸಿದ್ದರಾಮಯ್ಯ
|

Updated on: Apr 18, 2024 | 1:11 PM

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ (Raksha Ramaiah) ಪರ ಪ್ರಚಾರ ಮಾಡಲು ತೆರಳುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಕನ್ನಡದಲ್ಲಿ ಕೇಳಿದ ಪ್ರಶ್ನೆಗೆ ಇಂಗ್ಲಿಷ್ ನಲ್ಲಿ ಉತ್ತರಿಸಿದ ಅವರು ರಾಜ್ಯದ ಎಲ್ಲ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ, ದೇಶದ ಉಳಿದ ಭಾಗಗಳಲ್ಲಿ (rest of India) ಪಕ್ಷಕ್ಕೆ ಯಾವ ರೀತಿಯ ಬೆಂಬಲ ಸಿಗುತ್ತಿದೆ ಅಂತ ಗೊತ್ತಿಲ್ಲದ ಕಾರಣ ಕಾಮೆಂಟ್ ಮಾಡಲಾರೆ ಎಂದು ಹೇಳಿದರು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 20 ಸ್ಥಾನ ಸಿಗಲಿವೆ ಎಂದು ಮುಖ್ಯಮಂತ್ರಿ ಹೇಳಿದರು. ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಂತು ಹೋಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವುದಕ್ಕೆ ಉತ್ತರಿಸಿದ ಅವರು, ಅವರೇನು ಜ್ಯೋತಿಷಿಯಾ? ಎಂದು ಕೇಳಿದರು. ಈಗಿನ ಅವಧಿಯ ನಂತರ ಮುಂದಿನ ಅವಧಿಗೂ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಮತ್ತು ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಮುಂದಿನ ಹಣಕಾಸು ವರ್ಷದಲ್ಲಿ ಯೋಜನೆಗಳಿಗೆ ₹ 52,000 ಕೋಟಿ ವಿನಿಯೋಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೋಲಾರದಲ್ಲಿ ಡಿಕೆ ಶಿವಕುಮಾರ್ ಅಬ್ಬರದ ಭಾಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆರಗಾದರೆ?

Follow us