Karnataka Bandh: ವಿದ್ಯುತ್ ದರ ಏರಿಕೆ ವಿರುದ್ಧ ಕೆಸಿಸಿಐ ನೀಡಿದ ಕರ್ನಾಟಕ ಬಂದ್ ಕರೆಗೆ ಕಲಬುರಗಿಯಲ್ಲಿ ಉತ್ತಮ ಪ್ರತಿಕ್ರಿಯೆ
ಬಂದ್ ನಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು ನಿಜ. ಬೇರೆ ಜಿಲ್ಲೆಗಳಲ್ಲೂ ವಿದ್ಯುತ್ ದರ ಏರಿಕೆ ವಿರುದ್ಧ ಪ್ರತಿಭಟನೆಗಳು ನಡೆದಿವೆ.
ಕಲಬುರಗಿ: ವಿದ್ಯುತ್ ದರ ಏರಿಕೆ ವಿರುದ್ಧ ರಾಜ್ಯಾದ್ಯಂತ ಬಂದ್ ಆಚರಿಸಲು ಕರ್ನಾಟಕ ವಾಣಿಜೋದ್ಯಮ ಸಂಸ್ಥೆ (ಕೆಸಿಸಿಐ) (KCCI) ನೀಡಿದ ಕರೆಗೆ ಜಿಲ್ಲ್ಲಾ ಕೇಂದ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಲಬುರಗಿಯಲ್ಲಿ (Kalaburagi) ವ್ಯಾಪಾರಸ್ಥರು, ವಾಣಿಜ್ಯೋದ್ಯಮಿಗಳು ಅಂಗಡಿ ಮುಂಗಡಿಗಳನ್ನು ಮುಚ್ಚಿ ಕಾಂಗ್ರೆಸ್ ಸರ್ಕಾರ (Congress government) ಮತ್ತು ಕೆಇಆರ್ ಸಿ (KERC) ವಿರುದ್ಧ ಘೋಷಣೆ ಕೂಗಿದರು. ನಗರದ ಸ್ಟೇಶನ್ ರೋಡ್ ರಸ್ತೆ ಮತ್ತು ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಅಂಗಡಿಗಳು ಮುಚ್ಚಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಬಂದ್ ನಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು ನಿಜ. ಬೇರೆ ಜಿಲ್ಲೆಗಳಲ್ಲೂ ವಿದ್ಯುತ್ ದರ ಏರಿಕೆ ವಿರುದ್ಧ ಪ್ರತಿಭಟನೆಗಳು ನಡೆದಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ