ರಾಮನಗರದ ಬಿಡದಿ ಬಳಿ ಹಳಿತಪ್ಪಿದ ಗೂಡ್ಸ್​​ ರೈಲು, ತಪ್ಪಿದ ಭಾರಿ ದುರಂತ

Edited By:

Updated on: Feb 17, 2026 | 6:59 PM

ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿರುವ ಘಟನೆ ಬೆಂಗಳೂರು- ಮೈಸೂರು ಮಾರ್ಗದ ಬಿಡದಿ ಸಮೀಪ ನಡೆದಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಈ ಭಾಗದಿಂದ ಸಂಚರಿಸಬೇಕಿದ್ದ ಟ್ರೇನ್​​ಗಳಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ರಾಮನಗರ, ಫೆಬ್ರವರಿ 17: ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಬಳಿ ನಡೆದಿದೆ. ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿದ್ದು, ಕೆಲ ಕಿಲೋ ಮೀಟರ್‌ವರೆಗೂ ಹಳಿ ಬಿಟ್ಟು ರೈಲು ಚಲಿಸಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಬೆಂಗಳೂರು-ಮೈಸೂರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More