ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!

Updated on: Feb 21, 2026 | 12:17 PM

ಗೋರಿಪಾಳ್ಯದ ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದೆ. ಕಳಪೆ ಸ್ಥಿತಿಯಲ್ಲಿರುವ ಇದು ಅನೈತಿಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಡ್ರಗ್ಸ್ ಚಟುವಟಿಕೆಗಳಿಗೂ ಬಳಕೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಅಧಿಕಾರಿಗಳು ಕೂಡಲೇ ಗಮನಹರಿಸಿ, ಬಡವರಿಗೆ ಅನುಕೂಲವಾಗುವಂತೆ ಕ್ಯಾಂಟೀನ್ ಪುನರಾರಂಭಿಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಗೋರಿಪಾಳ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಿದೆ. ಬಡವರ ಅಕ್ಷಯ ಪಾತ್ರೆ ಎಂದೇ ಕರೆಯಲ್ಪಡುತ್ತಿದ್ದ ಈ ಕ್ಯಾಂಟೀನ್ ಪ್ರಸ್ತುತ ದಯನೀಯ ಸ್ಥಿತಿಯಲ್ಲಿದೆ. ಕಳೆದ ಎರಡು-ಮೂರು ತಿಂಗಳಿಂದ ಕ್ಯಾಂಟೀನ್ ಮುಚ್ಚಲ್ಪಟ್ಟಿದೆ. ಸ್ಥಳೀಯರ ಪ್ರಕಾರ, ಕ್ಯಾಂಟೀನ್ ಆವರಣವನ್ನು ಈಗ ಗಾಂಜಾ ಮತ್ತು ಇತರೆ ಅನೈತಿಕ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಸದ್ಯ ಸ್ಥಳೀಯರು ಆಕ್ರೋಶಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಹಿಂದೆ ಬಡವರು ಇಲ್ಲಿ ನೆಮ್ಮದಿಯಿಂದ ಊಟ ಮಾಡುತ್ತಿದ್ದರು. ಆದರೆ ಈಗ ಕ್ಯಾಂಟೀನ್ ಸುತ್ತಮುತ್ತ ಕಸ ಮತ್ತು ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಅಧಿಕಾರಿಗಳು, ಕಾರ್ಪೊರೇಟರ್‌ಗಳು ಈ ಬಗ್ಗೆ ಗಮನಹರಿಸಿ, ಕ್ಯಾಂಟೀನ್ ಅನ್ನು ಸ್ವಚ್ಛಗೊಳಿಸಿ, ಪುನಃ ತೆರೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವರದಿ: ಅರುಣ್​ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More