ಗೌತಮಿಯ ಮುದ್ದಾಡಿದ ಶ್ವಾನಗಳು; ಬಿಗ್ ಬಾಸ್​ನಿಂದ ಬಂದ ಸ್ಪರ್ಧಿಗೆ ಹೇಗಿತ್ತು ಸ್ವಾಗತ ನೋಡಿ

Updated on: Jan 20, 2025 | 9:30 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೌತಮಿ ಅವರು ಎಲಿಮಿನೇಟ್ ಆಗಿ ಬಂದರು. ಅವರಿಗೆ ಎಲ್ಲ ಕಡೆಯಿಂದ ಭವ್ಯ ಸ್ವಾಗತ ಸಿಕ್ಕಿದೆ. ಆ ಸಂದರ್ಭದ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.

ಗೌತಮಿ ಅವರಿಗೆ ತಾವು ಸಾಕಿದ ಶ್ವಾನದ ಬಗ್ಗೆ ವಿಶೇಷ ಪ್ರೀತಿ ಇತ್ತು. ಅದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದರು. ಬಿಗ್ ಬಾಸ್​ನಿಂದ ಬಂದ ಗೌತಮಿ ಅವರಿಗೆ ಅವುಗಳಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ಗೌತಮಿ ಅವರನ್ನು ಅವು ಮುದ್ದಾಡಿವೆ. ಕೇಕ್ ಕತ್ತರಿಸಿ ಮನೆಯಲ್ಲಿ ಸಂಭ್ರಮಿಸಲಾಗಿದೆ. ಆ ಸಂದರ್ಭದ ವಿಡಿಯೋನ ಅವರು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More