ಬಿಗ್ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ ಅಭಿಷೇಕ್; ಹೇಗಿತ್ತು ಮಂಜು ರಿಯಾಕ್ಷನ್?
ಗೌತಮಿ ಜಾದವ್ ಗಂಡ ಅಭಿಷೇಕ್ ಕಾಸರಗೋಡು ಅವರು ಬಿಗ್ ಬಾಸ್ ಮನೆಗೆ ಬಂದು ವೆಡ್ಡಿಂಗ್ ಆ್ಯನಿವರ್ಸರಿ ಸೆಲೆಬ್ರೇಟ್ ಮಾಡಿದ್ದಾರೆ. ಪತಿ ಬಂದಿದ್ದಕ್ಕೆ ಗೌತಮಿ ಜಾದವ್ ಅವರಿಗೆ ತುಂಬ ಖುಷಿ ಆಗಿದೆ. ಅದಕ್ಕಾಗಿ ಅವರು ಬಿಗ್ ಬಾಸ್ಗೆ ಧನ್ಯವಾದ ತಿಳಿಸಿದ್ದಾರೆ. ಈ ವಾರದ ಸಂಚಿಕೆಗಳಲ್ಲಿ ಕುಟುಂಬದವರ ಭೇಟಿಗೆ ಅವಕಾಶ ನೀಡಲಾಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋಗೆ ಗೌತಮಿ ಜಾದವ್ ಅವರ ಪತಿ ಅಭಿಷೇಕ್ ಕಾಸರಗೋಡು ಬಂದಿದ್ದಾರೆ. ಬಿಗ್ ಬಾಸ್ ಮನೆಯ ಒಳಗೆ ಅವರು ವಿವಾಹ ವಾರ್ಷಿಕೋತ್ಸವ ಆಚರಿಸಿದ್ದಾರೆ. ಈ ಖುಷಿಯ ಕ್ಷಣದಲ್ಲಿ ದೊಡ್ಮನೆ ಸದಸ್ಯರು ಭಾಗಿ ಆಗಿದ್ದಾರೆ. ಈ ಸಂದರ್ಭದಲ್ಲಿ ಉಗ್ರಂ ಮಂಜು ಅವರ ರಿಯಾಕ್ಷನ್ ಹೇಗಿತ್ತು ಎಂಬುದನ್ನು ತಿಳಿಸುವಂತಹ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos