ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸರ್ಕಾರ ಕ್ರಮ; ಸಚಿವ ಪ್ರಿಯಾಂಕ್ ಖರ್ಗೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Sep 14, 2023 | 7:10 PM

ಸಾಮಾಜಿಕ ಜಾಲತಾಣಗಳಲ್ಲಿ ಬರುವ ವಿಚಾರಗಳು ಸತ್ಯ ಅಥವಾ ಸುಳ್ಳು ಎಂಬುದಷ್ಟೇ ನಾವು ಹೇಳಲು ಹೊರಟಿದ್ದೇವೆ. ಯಾವುದೇ ಹೊಸ ಕಾನೂನು, ಅಥವಾ ಮಸೂದೆ ತರಲು ಹೊರಟಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.

ಬೆಂಗಳೂರು, ಸೆ.14: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank kharge) ಹೇಳಿದರು. ಇಂದು (ಸೆ.14) ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಇರುವ ಕಾನೂನಿನಡಿಯಲ್ಲೇ  ದಳವೊಂದನ್ನು ರಚಿಸಿ, ಅದಕ್ಕೆ ನೋಡಲ್​ ಅಧಿಕಾರಿಯನ್ನು ನೇಮಕ ಮಾಡಿ, ಆ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದರು. ಇನ್ನು ನಾವು  ಸಾಮಾಜಿಕ ಜಾಲತಾಣ (Social Media)ಗಳಲ್ಲಿ ಬರುವ ವಿಚಾರಗಳು ಸತ್ಯ ಅಥವಾ ಸುಳ್ಳು ಎಂಬುದಷ್ಟೇ ನಾವು ಹೇಳಲು ಹೊರಟಿದ್ದೇವೆ. ಯಾವುದೇ ಹೊಸ ಕಾನೂನು, ಅಥವಾ ಮಸೂದೆ ತರಲು ಹೊರಟಿಲ್ಲ ಎಂದು ಹೇಳಿದರು.

ಪ್ರಧಾನ ಮಂತ್ರಿಗಳೇ ಒಂದು ಟ್ವೀಟ್ ಮಾಡಿದ್ದಾರೆ. ‘ಸುಳ್ಳು ಸುದ್ದಿಗಳ ಸತ್ಯಾನ್ವೇಷಣೆ ಕಡ್ಡಾಯ ಎಂದು. ಇದು ಪ್ರಧಾನ ಮಂತ್ರಿಗಳ ಕಛೇರಿ ಟ್ವೀಟ್. ಚೀಫ್ ಜಸ್ಟೀಸ್ ಆಫ್ ಇಂಡಿಯಾ ಚಂದ್ರಚೂಡ್ ಅವರ ಅಭಿಪ್ರಾಯ ಕೂಡ ಹೌದು, ಸುಳ್ಳು ಸುದ್ದಿಯಿಂದ ಜನ ದಿಕ್ಕುತಪ್ಪಿದ್ರೆ, ಪ್ರಜಾಪ್ರಭುತ್ವದ ಉಳಿವಿಗೆ ಮಾರಕ ಎಂಬ ಮಾತನ್ನು ಹೇಳಿದ್ದಾರೆ. ಇನ್ನು ಇಂಡಿಯಾ ಟುಡೇ ಸರ್ವೆ ಪ್ರಕಾರ 78% ರಷ್ಟು ಜನ ಸುಳ್ಳು ಸುದ್ದಿಗಳಿಂದ ಕೋಮು ಭಾವನೆಗಳಿಗೆ ಒಳಗಾಗ್ತಾ ಇದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Sep 14, 2023 05:15 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More