Government Employees Go On Strike: ಮುಷ್ಕರಕ್ಕೆ ಮಣಿದ ಸರ್ಕಾರದಿಂದ ನೌಕರರ ವೇತನ ಶೇಕಡ 17ರಷ್ಟು ಹೆಚ್ಚಿಸಿ ತಾತ್ಕಾಲಿಕ ಆದೇಶ

ಅರುಣ್​ ಕುಮಾರ್​ ಬೆಳ್ಳಿ

Updated on: Mar 01, 2023 | 12:34 PM

ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರ್ಥಮಾಡಿಕೊಂಡ ಮುಖ್ಯಮಂತ್ರಿಗಳು ನೌಕರರ ಆಗ್ರಹಕ್ಕೆ ಮಣಿದು ಅವರ ವೇತನವನ್ನು ಶೇಕಡ 17ರಷ್ಟು ಹೆಚ್ಚಿಸಿ ಹಂಗಾಮಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಏಳನೇ ವೇತನ ಆಯೋಗದ (7th Pay Commission) ಶಿಫಾರಸ್ಸುಗಳನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಸವಾಲೊಡ್ಡಿ ಬುಧವಾರ ರಾಜ್ಯದಾದ್ಯಂತ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ ಬಳಿಕ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ತನ್ನ ಧೋರಣೆಯನ್ನು ಬದಲಾಯಿಸಿದೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರ್ಥಮಾಡಿಕೊಂಡ ಮುಖ್ಯಮಂತ್ರಿಗಳು ನೌಕರರ (employees) ಆಗ್ರಹಕ್ಕೆ ಮಣಿದು ಅವರ ವೇತನವನ್ನು ಶೇಕಡ 17ರಷ್ಟು ಹೆಚ್ಚಿಸಿ ಹಂಗಾಮಿ ಆದೇಶ ಹೊರಡಿಸಿದ್ದಾರೆ. ಆದರೆ ಸರ್ಕಾರದಿಂದ ನಿರ್ಣಯದಿಂದ ನೌಕರರು ಸಂತುಷ್ಟರಾದಂತಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.