ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ನುಗ್ಗಿದ ಸರ್ಕಾರಿ ಬಸ್: 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಕೆರೆಗೆ ನುಗ್ಗಿದ್ದು, 50ಕ್ಕೂ ಹೆಚ್ಚು ಜನರು ಸುರಕ್ಷಿತವಾಗಿ ಪಾರಾಗಿರುವಂತಹ ಘಟನೆ ತಾಲೂಕಿನ ಸಂತೇಮರಹಳ್ಳಿ ರೇಷ್ಮೆ ಕಾರ್ಖಾನೆ ಬಳಿ ನಡೆದಿದೆ.
ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ (Government bus) ಕೆರೆಗೆ ನುಗ್ಗಿದ್ದು, 50ಕ್ಕೂ ಹೆಚ್ಚು ಜನರು ಸುರಕ್ಷಿತವಾಗಿ ಪಾರಾಗಿರುವಂತಹ ಘಟನೆ ತಾಲೂಕಿನ ಸಂತೇಮರಹಳ್ಳಿ ರೇಷ್ಮೆ ಕಾರ್ಖಾನೆ ಬಳಿ ನಡೆದಿದೆ. ಚಾಮರಾಜನಗರದಿಂದ ಕೊಳ್ಳೇಗಾಲಕ್ಕೆ ಬಸ್ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕೆರೆ ನೀರಿನಲ್ಲಿ ಕೆಎಸ್ಆರ್ಟಿಸಿ ಬಸ್ ಅರ್ಧ ಮುಳುಗಿ ಹೋಗಿದೆ. ಕಿಟಕಿ ಮತ್ತು ಹಿಂಬಾಗಿಲಿನ ಮೂಲಕ ಪ್ರಯಾಣಿಕರು ಹೊರಬಂದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಸಂತೇಮರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.