ಸಾರಿಗೆ ನೌಕರರು ಮುಷ್ಕರ ಆರಂಭಿಸಿದರೆ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ: ಪರಮೇಶ್ವರ್
ಸಾರಿಗೆ ನೌಕರರು ಮುಷ್ಕರ ಆರಂಭಿಸಿದರೆ ಸರ್ಕಾರ ಎಸ್ಮಾ ಕಾಯಿದೆ ಜಾರಿಮಾಡಲು ಸಿದ್ಧತೆ ಮಾಡಿಕೊಂಡಿದೆ ಮತ್ತು ಖಾಸಗಿ ಬಸ್ಸಗಳ ಸೇವೆ ಪಡೆಯಲು ಯೋಚಿಸುತ್ತಿದೆ. ಆದರೆ ಅದು ಅಷ್ಟು ಸುಲಭವಲ್ಲ. ರಾಜ್ಯ ಸಾರಿಗೆ ಸಂಸ್ಥೆಯ ಸಮಾರು 23,000 ಬಸ್ಸುಗಳ ಸೇವೆಯನ್ನು ಬದಲೀ ಬಸ್ಸುಗಳ ಮೂಲಕ ನಿಭಾಯಿಸುವುದು ಸಾಧ್ಯವಿಲ್ಲ. ವಸ್ತುಸ್ಥಿತಿಯ ಬಗ್ಗೆ ಸ್ಪಷ್ಟವಾದ ಮಾಹಿತಿ ಇದ್ದರೂ ಸರ್ಕಾರ ಸುಖಾಸುಮ್ಮನೆ ಯಾಕೆ ಹಠ ಸಾಧಿಸುತ್ತಿದೆ ಅಂತ ಅರ್ಥವಾಗಲ್ಲ.
ಬೆಂಗಳೂರು, ಆಗಸ್ಟ್ 4: ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ನೌಕರರು (KSRTC employees) ನಾಳೆಯಿಂದ ಅನಿರ್ದಾಷ್ಟವಧಿಗೆ ಮುಷ್ಕರ ಆರಂಭಿಸಲಿದ್ದಾರೆ. ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯನ್ನು ಇವತ್ತು ನಗರದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ (G Parameshwar), ಇದು ಬೇರೆ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಯೆಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದರೂ; ಯಾವುದೇ ಸಮಸ್ಯೆ, ಪರಿಸ್ಥಿತಿಯನ್ನು ನಿಭಾಯಿಸಲು ತಮ್ಮ ಸರ್ಕಾರ ಸಮರ್ಥವಾಗಿದೆ ಎಂದು ಹೇಳಿದರು. ಸಿಎಂ ಜೊತೆ ನಡೆಯುವ ಮಾತುಕತೆ ವಿಫಲಗೊಂಡರೆ ಮುಷ್ಕರ ಶುರುವಾಗೋದು ನಿಶ್ಚಿತ, ಹಾಗಾಗಿ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆಯೇ ಅಂತ ಕೇಳಿದರೆ ಎಲ್ಲ ಕಡೆಯೂ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.
ಇದನ್ನೂ ಓದಿ: ಹೈಕಮಾಂಡ್ ನಮಗೆ ಬ್ರೇಕ್ ಹಾಕೋಕೆ ಆಗಲ್ಲ: ಪರಮೇಶ್ವರ್
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

