ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯೆಂದು ಪುನರ್ನಾಮಕರಣ ಮಾಡಲು ಸರ್ಕಾರದ ನಿರ್ಧಾರ
ಹೊಸದಾಗಿ ರಚಿಸಲಾಗಿರುವ ತಾಲೂಕುಗಳ ಪೈಕಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಲ್ಲವೋ (ಪಿಹೆಚ್ಸಿ) ಅಂಥ ಸ್ಥಳಗಳಲ್ಲಿ ಸಮುದಾಯ ಅರೋಗ್ಯ ಕೇಂದ್ರ (CHC) ಸ್ಥಾಪಿಸುವ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇವತ್ತಿನ ಸಭೆಯಲ್ಲಿ ಒಟ್ಟು 48 ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ, ಎಲ್ಲವನ್ನೂ ಇಲ್ಲಿ ಹೇಳಲಾಗಲ್ಲ ಎಂದು ಅವರು ಹೇಳಿದರು.
ಚಿಕ್ಕಬಳ್ಳಾಪುರ, ಜುಲೈ 2: ನಂದಿ ಗಿರಿಧಾಮದಲ್ಲಿ ಇವತ್ತು ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್ ಕೆ ಪಾಟೀಲರ (HK Patil) ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ತೆಗೆದುಕೊಂಡ ಕೆಲ ನಿರ್ಣಯಗಳನ್ನು ಮಾಧ್ಯಮದವರಿಗೆ ತಿಳಿಸಿದರು. ಈಗಾಗಲೇ ವರದಿ ಮಾಡಿರುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಅಂತ ಪುನರ್ ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಹಾಗೆಯೇ, ಕೋಲಾರ ಜಿಲ್ಲೆಯಲ್ಲಿರುವ ಬಾಗೇಪಲ್ಲಿಯ ಹೆಸರನ್ನು ಭಾಗ್ಯನಗರ ಎಂದ ಬದಲಾಯಿಸಲು ತಿರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಬಾಗೇಪಲ್ಲಿ ತಾಲೂಕಲ್ಲಿ ಪಲ್ಲಿಯಿಂದ ಕೊನೆಗೊಳ್ಳುವ ಎಲ್ಲ ಊರುಗಳ ಹೆಸರುಗಳನ್ನು ಬದಲಾಯಿಸುತ್ತೀರಾ ಅಂತ ಕೇಳಿದರೆ, ಗೊತ್ತಿಲ್ಲ ಕಣಯ್ಯ, ನಮ್ಮ ಶಾಸಕರು ಹೇಳಿದಂತೆ ಮಾಡಿದ್ದೇವೆ ಎಂದು ನಗುತ್ತಾ ಸಿಎಂ ಹೇಳಿದರು.
ಇದನ್ನೂ ಓದಿ: ನನಗೆ ಬೇರೆ ಮಾರ್ಗವಿಲ್ಲ, ಸಿದ್ದರಾಮಯ್ಯ ಬೆನ್ನಿಗೆ ನಿಂತು ಬೆಂಬಲಿಸುತ್ತೇನೆ: ಡಿಕೆ ಶಿವಕುಮಾರ್
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ