ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯೆಂದು ಪುನರ್​ನಾಮಕರಣ ಮಾಡಲು ಸರ್ಕಾರದ ನಿರ್ಧಾರ

ಅರುಣ್​ ಕುಮಾರ್​ ಬೆಳ್ಳಿ

Updated on: Jul 02, 2025 | 8:00 PM

ಹೊಸದಾಗಿ ರಚಿಸಲಾಗಿರುವ ತಾಲೂಕುಗಳ ಪೈಕಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಲ್ಲವೋ (ಪಿಹೆಚ್​ಸಿ) ಅಂಥ ಸ್ಥಳಗಳಲ್ಲಿ ಸಮುದಾಯ ಅರೋಗ್ಯ ಕೇಂದ್ರ (CHC) ಸ್ಥಾಪಿಸುವ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇವತ್ತಿನ ಸಭೆಯಲ್ಲಿ ಒಟ್ಟು 48 ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ, ಎಲ್ಲವನ್ನೂ ಇಲ್ಲಿ ಹೇಳಲಾಗಲ್ಲ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರ, ಜುಲೈ 2: ನಂದಿ ಗಿರಿಧಾಮದಲ್ಲಿ ಇವತ್ತು ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್ ಕೆ ಪಾಟೀಲರ (HK Patil) ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ತೆಗೆದುಕೊಂಡ ಕೆಲ ನಿರ್ಣಯಗಳನ್ನು ಮಾಧ್ಯಮದವರಿಗೆ ತಿಳಿಸಿದರು. ಈಗಾಗಲೇ ವರದಿ ಮಾಡಿರುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಅಂತ ಪುನರ್ ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಹಾಗೆಯೇ, ಕೋಲಾರ ಜಿಲ್ಲೆಯಲ್ಲಿರುವ ಬಾಗೇಪಲ್ಲಿಯ ಹೆಸರನ್ನು ಭಾಗ್ಯನಗರ ಎಂದ ಬದಲಾಯಿಸಲು ತಿರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಬಾಗೇಪಲ್ಲಿ ತಾಲೂಕಲ್ಲಿ ಪಲ್ಲಿಯಿಂದ ಕೊನೆಗೊಳ್ಳುವ ಎಲ್ಲ ಊರುಗಳ ಹೆಸರುಗಳನ್ನು ಬದಲಾಯಿಸುತ್ತೀರಾ ಅಂತ ಕೇಳಿದರೆ, ಗೊತ್ತಿಲ್ಲ ಕಣಯ್ಯ, ನಮ್ಮ ಶಾಸಕರು ಹೇಳಿದಂತೆ ಮಾಡಿದ್ದೇವೆ ಎಂದು ನಗುತ್ತಾ ಸಿಎಂ ಹೇಳಿದರು.

ಇದನ್ನೂ ಓದಿ:   ನನಗೆ ಬೇರೆ ಮಾರ್ಗವಿಲ್ಲ, ಸಿದ್ದರಾಮಯ್ಯ ಬೆನ್ನಿಗೆ ನಿಂತು ಬೆಂಬಲಿಸುತ್ತೇನೆ: ಡಿಕೆ ಶಿವಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.