OPS vs NPS: ಎನ್ ಪಿಎಸ್ ರದ್ದುಗೊಳಿಸಿ ಹಳೆ ಪೆನ್ಷನ್ ಜಾರಿಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಮನವಿ ಮಾಡಿದ ಎನ್ ಪಿಎಸ್ ನೌಕರರ ಸಂಘ

ಅರುಣ್​ ಕುಮಾರ್​ ಬೆಳ್ಳಿ

Updated on: Jun 12, 2023 | 6:06 PM

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಾಂತಾರಾಮ್, ಉಪ ಮುಖ್ಯಮಂತ್ರಿಗಳು ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರೆಂದು ಹೇಳಿದರು.

ಬೆಂಗಳೂರು: ಹೊಸ ಪಿಂಚಣಿ ಪದ್ಧತಿಯನ್ನು (New Pension Scheme) ರಾಜ್ಯ ಸರ್ಕಾರೀ ನೌಕರರು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದಾರೆ. ರಾಜ್ಯ ಸರ್ಕಾರೀ ನೌಕರರ ಎನ್ ಪಿ ಎಸ್ ಸಂಘದ ಅಧ್ಯಕ್ಷ ಶಾಂತಾರಾಮ್ (Shantaram) ಅವರ ನೇತೃತ್ವದಲ್ಲಿ ವಿವಿಧ ಸರ್ಕಾರೀ ನೌಕರರ ಸಂಘಟನೆಗಳ ನಿಯೋಗವೊಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಿ ಹೊಸ ಪೆನ್ಷನ್ ಸ್ಕೀಮ್ ರದ್ದುಗೊಳಿಸಿ ಹಳೆ ಹಳೆ ಪೆನ್ಷನ್ ಸ್ಕೀಮನ್ನು ಜಾರಿಗೊಳಿಸುವಂತೆ ಮನವಿ ಮಾಡಿತು. ಶಿವಕುಮಾರ್ ಅವರ ಭೇಟಿಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಾಂತಾರಾಮ್, ಉಪ ಮುಖ್ಯಮಂತ್ರಿಗಳು ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರೆಂದು ಹೇಳಿದರು. ಒಪಿಎಸ್ ಅನ್ನು ಆದ್ಯತೆಯಾಗಿ ಪರರಿಣಿಸಿ ಆದಷ್ಟು ಬೇಗ ಇನ್ನೊಂದು ಸಭೆ ಕರೆಯುವ ಭರವಸೆಯನ್ನು ಶಿವಕುಮಾರ್ ನೀಡಿದರಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.