ದರ್ಶನ್ ಜಾಮೀನು ವಿಸ್ತರಣೆ ತಡೆಯಲು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಲು ಕಾನೂನು ಪ್ರಕ್ರಿಯೆ ಆರಂಭವಾಗಿದೆ: ಪರಮೇಶ್ವರ್
ದರ್ಶನ್ ವಿರುದ್ಧ ಮತ್ತಷ್ಟು ಸಾಕ್ಷ್ಯಗಳು ಲಭ್ಯವಾದ ನಂತರ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಸಲಾಗುವುದು ಎಂದು ಹೇಳಿದ ಪರಮೇಶ್ವರ್, ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳು ರದ್ದಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿಯವರು ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಮೊದಲು ಕೇಂದ್ರ ಸರ್ಕಾರವನ್ನು ಕೇಳಲಿ, ಯಾಕೆಂದರೆ ಕೇಂದ್ರ 5.8 ಕೋಟಿ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿದೆ ಎಂದರು.
ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹಸಚಿವ ಜಿ ಪರಮೇಶ್ವರ್, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಅರೋಪಿಯಾಗಿರುವ ನಟ ದರ್ಶನ್ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಹೈಕೋರ್ಟ್ ಮೂರು ತಿಂಗಳು ಅವಧಿಯ ಮಧ್ಯಂತರ ಜಾಮೀನು ನೀಡಿದೆ, ಅವಧಿ ಮುಗಿದ ತಕ್ಷಣ ಅವರು ಜೈಲಿಗೆ ವಾಪಸ್ಸು ಹೋಗಬೇಕಾಗುತ್ತದೆ, ಏತನ್ಮಧ್ಯೆ ಅವರ ಜಾಮೀನು ವಿಸ್ತರಣೆಗೆ ಅವಕಾಶ ನೀಡಬಾರದೆಂದು ಸರ್ವೋಚ್ಛ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಶುರು ಮಾಡಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿಎಂ ಬಾಮೈದ ನೋಟೀಸ್ ಇಲ್ಲದೆ ಲೋಕಾಯುಕ್ತ ಕಚೇರಿಗೆ ಯಾಕೆ ಹೋಗಿದ್ದರು ಗೊತ್ತಿಲ್ಲ: ಪರಮೇಶ್ವರ್
Latest Videos