ದಲಿತ ಕುಟುಂಬವೊಂದನ್ನು ಹೆದರಿಸಿದರೂ ಸಚಿವ ಆನಂದ್ ಸಿಂಗ್ ಮೇಲೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ: ಕುಮಾರಸ್ವಾಮಿ
ಕುಟುಂಬಕ್ಕೆ ಧಮ್ಕಿ ಹಾಕಿದ್ದಲ್ಲದೆ, ಅದರ ಸದಸ್ಯರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಸಚಿವರು ದೂರಿರುವುದು ಯಾವಮಟ್ಟಿಗೆ ಅಧಿಕಾರದ ದುರುಪಯೋಗ ಆಗುತ್ತಿದೆ ಅನ್ನೋದನ್ನು ಸೂಚಿಸುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ಸಚಿವ ಆನಂದ್ ಸಿಂಗ್ (Anand Singh) ಅವರು ಹೊಸಪೇಟೆಯಲ್ಲಿ ದಲಿತ ಕುಟುಂಬವೊಂದಕ್ಕೆ ಬೆದರಿಕೆ ಒಡ್ಡಿದ್ದರೂ ಅವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಜರುಗಿಸದಿರುವುದನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಖಂಡಿಸಿದ್ದಾರೆ. ಬೆಂಗಳೂರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕುಟುಂಬಕ್ಕೆ ಧಮ್ಕಿ ಹಾಕಿದ್ದಲ್ಲದೆ, ಅದರ ಸದಸ್ಯರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಸಚಿವರು ದೂರಿರುವುದು ಯಾವಮಟ್ಟಿಗೆ ಅಧಿಕಾರದ ದುರುಪಯೋಗ ಆಗುತ್ತಿದೆ ಅನ್ನೋದನ್ನು ಸೂಚಿಸುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.