ನಾಮಫಲಕಗಳ ಮೇಲೆ ಶೇಕಡ 60 ರಷ್ಟು ಕನ್ನಡ ಕಡ್ಡಾಯ ಮಾಡುವಲ್ಲಿ ರಾಜ್ಯ ಸೂಕ್ತ ಕ್ರಮ ತೆಗೆದುಕೊಂಡಿದೆ: ನಾರಾಯಣಗೌಡ, ಕರವೇ

|

Updated on: Jul 01, 2024 | 8:14 PM

ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಡಾ ಸರೋಜಿನಿ ಮಹಿಷಿ ವರದಿ ಶಿಫಾರಸ್ಸು ಮಾಡಿರುವ ಹಾಗೆ ಶೇಕಡ 100ರಷ್ಟು ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಇಂದು ಕನ್ನಡ ಪರ ಸಂಘಟನೆಗಳು ನಡೆಸಿದ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ, ಅವರು ನೀಡಿರುವ ಆಶ್ವಾಸನೆ ಮೇಲೆ ತಮಗೆ ವಿಶ್ವಾಸವಿದೆ ಎಂದು ನಾರಾಯಣಗೌಡ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಡಾ ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸುವಂತೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಅಧ್ಯಕ್ಷ ಟಿಎ ನಾರಾಯಣಗೌಡರು, ರಾಜ್ಯದಲ್ಲಿ ಅಂಗಡಿ ಮುಂಗಟ್ಟುಗಳಿಗೆ ಪರವಾನಗಿ ನೀಡುವಾಗ ಅಂಗಡಿಯ ಫಲಕದ ಮೇಲೆ ಶೇಕಡ 60 ರಷ್ಟು ಕನ್ನಡ ಭಾಷೆಯಲ್ಲಿರಬೇಕೆಂಬ ನಮ್ಮ ಬೇಡಿಕೆಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿದೆ, ಈ ಕುರಿತಂತೆ ಕಾನೂನನ್ನೂ ರೂಪಿಸಿದೆ, ಸರ್ಕಾರದ ಕ್ರಮದಿಂದ ನಾವು ಸಂತುಷ್ಟರಾಗಿದ್ದೇವೆ ಎಂದು ಹೇಳಿದರು. ಮುಂದುವರಿದು ಮಾತಾಡಿದ ಅವರು ಸೋಮವಾರ ತಾನು ದೆಹಲಿಗೆ ಹೋಗಿ ಹೊಸ ಕೇಂದ್ರ ಸರ್ಕಾರದಲ್ಲಿ ರಾಜ್ಯದಿಂದ ಮಂತ್ರಿಗಳಾಗಿರುವ ಹೆಚ್ ಡಿ ಕುಮಾರಸ್ವಾಮಿ, ವಿ ಸೋಮಣ್ಣ ಪ್ರಲ್ಹಾದ್ ಜೋಶಿ ಮೊದಲಾದವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಅಗತ್ಯವಿರುವ ಯೋಜನೆಗಳ ಬಗ್ಗೆ ಅವರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದರು. ಅದಲ್ಲದೆ, ಜಿಎಸ್ ಟಿ ಮತ್ತು ಇತರ ತೆರಿಗೆಗಳ ಮೂಲಕ ರಾಜ್ಯದಿಂದ ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದಲ್ಲಿ ರಾಜ್ಯಕ್ಕೆ ₹ 1.86 ಲಕ್ಷ ಕೋಟಿ ಹಣ ಬರಬೇಕಿದೆ, ಅದನ್ನು ಬೇಗ ಬಿಡುಗಡೆ ಮಾಡುವಂತೆ ಧ್ವನಿ ಸೇರಿಸಿ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ, ಅದಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ನಾರಾಯಣಗೌಡ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Stop Hindi Imposiotion; ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ